ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Mysuru Dasara 2024: ಸೆ. 26ರಿಂದ ದಸರಾ ಗಜಪಡೆಗೆ ಕುಶಾಲತೋ‍ಪು ಅಭ್ಯಾಸ

Published : 25 ಸೆಪ್ಟೆಂಬರ್ 2024, 15:24 IST
Last Updated : 25 ಸೆಪ್ಟೆಂಬರ್ 2024, 15:24 IST
ಫಾಲೋ ಮಾಡಿ
Comments

ಮೈಸೂರು: ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳು ಮತ್ತು ಕುದುರೆಗಳಿಗೆ ‘ಕುಶಾಲತೋಪು ಸಿಡಿಸಿ, ಅದರ ಶಬ್ದಕ್ಕೆ ಬೆದರದಂತೆ ಮಾಡುವ ಪೂರ್ವಾಭ್ಯಾಸ’ವನ್ನು ಸೆ.26, 29 ಹಾಗೂ ಅ.1ರಂದು ಬೆಳಿಗ್ಗೆ 11ಕ್ಕೆ ನಗರದ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದ ವಾಹನಗಳ ನಿಲುಗಡೆ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿದೆ.

‘ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಈ ಅಭ್ಯಾಸ ನಡೆಸಲಾಗುವುದು’ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಡಿಸಿಎಫ್‌ ಐ.ಬಿ. ಪ್ರಭುಗೌಡ ತಿಳಿಸಿದ್ದಾರೆ.

‘ಕುಶಾಲತೋಪು ಪೂರ್ವಭ್ಯಾಸಕ್ಕೆ ಬರುವ ಆನೆಗಳನ್ನು ಗುರುವಾರ (ಸೆ.26) ಬೆಳಿಗ್ಗೆ 10.30ಕ್ಕೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದಿಂದ ಸ್ವಾಗತಿಸಲಾಗುವುದು’ ಎಂದು ಪ್ರಾಧಿಕಾರದ ಸಿಇಒ ರುದ್ರೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT