ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ‘ಯುವ ಸಂಭ್ರಮ’ ಇಂದಿನಿಂದ

Published : 24 ಸೆಪ್ಟೆಂಬರ್ 2024, 4:04 IST
Last Updated : 24 ಸೆಪ್ಟೆಂಬರ್ 2024, 4:04 IST
ಫಾಲೋ ಮಾಡಿ
Comments

ಮೈಸೂರು: ದಸರಾ ಪೂರ್ವಭಾವಿಯಾಗಿ ಇಲ್ಲಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ.24ರಿಂದ 30ರವರೆಗೆ ನಿತ್ಯ ಸಂಜೆ 5ಕ್ಕೆ ಆಯೋಜಿಸಲಾಗಿರುವ ‘ಯುವ ಸಂಭ್ರಮ’ ಮಂಗಳವಾರ ಸಂಜೆ ಗರಿಗೆದರಲಿದೆ.

ನಗರ, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ–ವಿದ್ಯಾರ್ಥಿನಿಯರ ತಂಡಗಳು ನೃತ್ಯ ಕಾರ್ಯಕ್ರಮ ನೀಡಲಿವೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಖ್ಯಾತ ಚಲನಚಿತ್ರ ನಟರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಉಪ ಸಮಿತಿ ತಿಳಿಸಿದೆ.

‘ಯುವ ಸಂಭ್ರಮ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 470 ಕಾಲೇಜುಗಳಿಂದ ಅರ್ಜಿಗಳು ಬಂದಿದ್ದವು. 370 ತಂಡಗಳಿಗಷ್ಟೆ  ಭಾಗವಹಿಸಲು ಸಾಧ್ಯವಾಗುತ್ತಿತ್ತು. ಎಲ್ಲರಿಗೂ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಯುವ ಸಂಭ್ರಮವನ್ನು ಒಂದು ದಿನ ವಿಸ್ತರಿಸುವಂತೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ರುಕ್ಮಿಣಿ ವಸಂತ್
ರುಕ್ಮಿಣಿ ವಸಂತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT