ಮೈಸೂರು: ‘ನಾಡಹಬ್ಬ ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ದಸರಾ ಮಹೋತ್ಸವದ ದೀಪಾಲಂಕಾರ ಸಮಿತಿಯಿಂದ ಇಲ್ಲಿನ ವಿಜಯನಗರ 2ನೇ ಹಂತದ ಸೆಸ್ಕ್ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಇತರ ಪ್ರಾಯೋಜಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡಬೇಕು. ಈ ಬಾರಿಯ ದಸರಾ ಉತ್ಸವವನ್ನು ವಿಜೃಂಭಣೆಯಿಂದ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಉನ್ನತ ಮಟ್ಟದ ಸಭೆಯಲ್ಲಿ ಸೂಚಿಸಿದ್ದಾರೆ. ಹಾಗಾಗಿ, ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.

ಸೆಸ್ಕ್ ತಾಂತ್ರಿಕ ನಿರ್ದೇಶಕ ಮುನಿಗೋಪಾಲ್ ರಾಜು ಮಾತನಾಡಿ, ‘ದಸರೆ ದೀಪಾಲಂಕಾರ ಅತ್ಯಂತ ಆಕರ್ಷಣೀಯವಾಗಿರಲಿದೆ. ಹೀಗಾಗಿ 3-4 ವರ್ಷಗಳಿಂದ ವಿಶೇಷ ಮೆರಗು ನೀಡುವ ಮೂಲಕ ಅದರ ಆಕರ್ಷಣೆ ಹೆಚ್ಚುವಂತೆ ಮಾಡಲಾಗಿದೆ. ಈ ವರ್ಷವೂ ಇನ್ನಷ್ಟು ಆಕರ್ಷಕವಾಗಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಯಾವ ಪರಿಕಲ್ಪನೆ ಇದೆ ಎಂಬುದನ್ನು ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಿರುವ ಪ್ರಾಯೋಜಕರು ಮೊದಲೇ ತಿಳಿಸಬೇಕು’ ಎಂದು ಹೇಳಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಇದರಿಂದಾಗಿ ಹೊಸ ಆಲೋಚನೆಗಳು ದೊರೆಯಲಿದ್ದು, ದಸರಾ ದೀಪಾಲಂಕಾರ ಆಕರ್ಷಕಗೊಳಿಸಲು ನೆರವಾಗಲಿದೆ’ ಎಂದರು.

ಆಕರ್ಷಣೆ ಹೆಚ್ಚಿಸುವ ಜತೆಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಚರ್ಚಿಸಲಾಯಿತು. ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಪ್ರಾಯೋಜಕರು, ವಿದ್ಯುತ್ ಗುತ್ತಿಗೆದಾರರು ಸಲಹೆಗಳನ್ನು ನೀಡಿದರು.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ರಮೇಶ್, ಸೆಸ್ಕ್ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಎಸ್‌ಇ ಸುನೀಲ್ ಕುಮಾರ್ ಪಾಲ್ಗೊಂಡಿದ್ದರು.

ದಸರಾ ದೀಪಾಲಂಕಾರವನ್ನು ಅತ್ಯಂತ ಆಕರ್ಷಕವಾಗಿಸಲು ಪ್ರಯತ್ನಗಳು ನಡೆದಿವೆ. ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ ಇದು ಸಾಧ್ಯವಾಗಲಿದೆ.
-ಜಿ.ಶೀಲಾ, ವ್ಯವಸ್ಥಾಪಕ ನಿರ್ದೇಶಕರು ಸೆಸ್ಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.