ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳುವ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತವು (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ದಸರೆಯ ಸಡಗರ ಇಮ್ಮಡಿಗೊಳಿಸುವ ಈ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಹೀಗೆ ವೀಕ್ಷಿಸುವಾಗ ಮುಂಜಾಗ್ರತೆ ವಹಿಸಬೇಕು ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಕೋರಿದ್ದಾರೆ.

‘ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸೆಸ್ಕ್ ವತಿಯಿಂದಲೂ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ದೀಪಾಲಂಕಾರ ಮಾಡಲಾಗಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಬೇಕು. ಕಂಬಗಳ ಹತ್ತಿರ ನಿಂತು ಫೋಟೊ, ವಿಡಿಯೊ ತೆಗೆಯುವುದನ್ನು ಮಾಡಬಾರದು. ಮಳೆ ಬಂದಾಗ ವಿದ್ಯುತ್ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಬೇಕು. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ಪ್ರತಿಕೃತಿಗಳನ್ನು ಇರಿಸಲಾಗಿದೆ. ಹೀಗಾಗಿ, ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಬೇಕು’ ಎಂದು ತಿಳಿಸಿದ್ದಾರೆ.

‘ವಿದ್ಯುತ್ ಸಂಬಂಧಿತ ದೂರು, ದೀಪಾಲಂಕಾರದಿಂದ ತೊಂದರೆ ಆದಲ್ಲಿ 24x7 ಸಹಾಯವಾಣಿ 1912 ಸಂಪರ್ಕಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.