ಮೈಸೂರು: ‘ದಸರಾ ಏರ್ಶೋ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ವಿತರಣೆಯಲ್ಲಿ ಅಕ್ರಮ ನಡೆದಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಜಂಬೂಸವಾರಿ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರೊಂದಿಗೆ ತೆರೆದ ಜೀಪ್ನಲ್ಲಿ ಮೊಮ್ಮಗನನ್ನು ಕರೆತಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕ್ಷಮೆ ಯಾಚಿಸಬೇಕು’ ಎಂದು ಕೋರಿದರು.

‘ಜಂಬೂಸವಾರಿಯಂದು ರಾಜಕೀಯ ನಾಯಕರು, ಅಧಿಕಾರಿಗಳು ಮತ್ತು ಅವರ ಕುಟುಂಬದವರಿಗೆ ಸರ್ಕಾರಿ ವಾಹನಗಳ ದುರ್ಬಳಕೆ ಮಾಡಲಾಗಿದೆ. ಅವರೆಲ್ಲರಿಗೂ ವಿವಿಐಪಿ ಕೋಟಾದಡಿ ಪ್ರವೇಶ ನೀಡಲಾಗಿದೆ’ ಎಂದು ದೂರಿದರು.

‘ಉತ್ಸವಕ್ಕೆ ಆದ ಖರ್ಚು–ವೆಚ್ಚದ ಬಗ್ಗೆ ತನಿಖೆ ನಡೆಸಬೇಕು’ ಎಂದರು.

ಪಕ್ಷದ ನಗರ ಘಟಕದ ಅಧ್ಯಕ್ಷ ನಾಗೇಂದ್ರ, ನಾಗರಾಜು, ರವಿ, ರಾಜೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.