ಮೈಸೂರು: ಪಾರಂಪರಿಕ ಕಟ್ಟಡಗಳ ನಗರ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಟಾಂಗಾ, ಸಾರೋಟ್ಗಳು ಸದ್ದು ಮಾಡಿದವು. ಅಂದವಾಗಿ ಸಿಂಗರಿಸಲ್ಪಟ್ಟ ಕುದುರೆ, ಟಾಂಗಾದಲ್ಲಿ ಮದುಮಕ್ಕಳಂತೆ ತಯಾರಾದ ದಂಪತಿಗಳ ವೈಭೋಗವನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಜನ ನಿಂತರು.

ದಸರಾ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯು ನಗರದ ರಂಗಚಾರ್ಲು ಪುರಭವನದಲ್ಲಿ ಪಾರಂಪರಿಕ ಕಟ್ಟಡ ಮತ್ತು ಇತಿಹಾಸದ ಮಾಹಿತಿ, ಪಾರಂಪರಿಕ ಉಡುಗೆಗಳನ್ನು ಪ್ರಚಲಿತಗೊಳಿಸುವುದು ಹಾಗೂ ನಶಿಸಿ ಹೋಗುತ್ತಿರುವ ಪಾರಂಪರಿಕ ಟಾಂಗಾಗಳ ಉಳಿಸುವಿಕೆ ಉದ್ದೇಶದಿಂದ ಆಯೋಜಿಸಲಾಗಿದ್ದ ಟಾಂಗಾ ಸವಾರಿ ಜನರನ್ನು ಸೆಳೆಯಿತು.

ನಟ ಪ್ರಕಾಶ್ ತುಮಿನಾಡು ದಂಪತಿ ಟಾಂಗಾ ಸವಾರಿಗೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ದಂಪತಿ ಎಲ್ಲರ ಗಮನಸೆಳೆದರು. ಮೈಸೂರು ಪೇಟ, ಪಂಚೆ ಮತ್ತು ಶಲ್ಯದೊಂದಿಗೆ ಪತಿ ಸಿದ್ಧವಾಗಿದ್ದರೆ, ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಪತ್ನಿ ತಯಾರಾಗಿದ್ದರು. ಉತ್ತರ ಕರ್ನಾಟಕ, ಕೊಡಗು, ಗೌಡರ ಶೈಲಿಯಲ್ಲಿ ಉಡುಪು ಧರಿಸಿದ್ದ ದಂಪತಿಗಳೂ ಭಾಗವಹಿಸಿದರು.

ಟಾಂಗಾ ಸವಾರಿಯು ನಗರದ ಪ್ರಮುಖ ರಸ್ತೆಗಳಾದ ದೊಡ್ಡ ಗಡಿಯಾರ, ಅಂಬಾ ವಿಲಾಸ ಅರಮನೆ, ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಕಟ್ಟಡ, ಜಗನ್ಮೋಹನ ಅರಮನೆ, ಮೈಸೂರು ನಗರ ಪಾಲಿಕೆ ದಾರಿ ಮೂಲಕ ಸಾಗಿ, ಮಹಾರಾಜ ಸಂಸ್ಕೃತ ಪಾಠಶಾಲೆ, ಕಾಡಾ ಕಚೇರಿ, ಗನ್ ಹೌಸ್ ವೃತ್ತದ ಮೂಲಕ ಹಾರ್ಡಿಂಜ್ ವೃತ್ತದಿಂದ ಪುರಭವನಕ್ಕೆ ಬಂದು ತಲುಪಿತು.

ನಗರದ ಪಾರಂಪರಿಕ ಕಟ್ಟಡಗಳ ಕುರಿತು ಮಾಹಿತಿ ನೀಡಲಾಯಿತು. ದಂಪತಿಗಳೊಂದಿಗೆ ಅವರ ಮನೆಯವರೂ ಟಾಂಗಾ ಸವಾರಿ ನಡೆಸಿ ಸಂತಸಪಟ್ಟರು. ‘ವಿವಿಧ ಭಾಗಗಳಿಂದ 50 ದಂಪತಿಗಳನ್ನು ಆಯ್ಕೆ ಮಾಡಿದ್ದು, 25 ಟಾಂಗಾಗಳಲ್ಲಿ ಸವಾರಿ ನಡೆಸಲಿದ್ದಾರೆ’ ಎಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರಾದ ದೇವರಾಜು ತಿಳಿಸಿದರು.

ಇತಿಹಾಸ ತಜ್ಞರಾದ ಡಾ.ಎನ್.ಎಸ್.ರಂಗರಾಜು, ಡಾ.ಸಲ್ವ ಪಿಳ್ಳೆ ಅಯ್ಯಂಗಾರ್, ಉಪ ನಿರ್ದೇಶಕರಾದ ಡಾ.ಸಿ.ಎನ್. ಮಂಜುಳಾ, ತಾರಕೇಶ್, ಅಂಬರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.