ಮೈಸೂರು: ‘ಎಸ್ಸಿಎಸ್ಪಿ ಮತ್ತು ಟಿಎಸ್ಪಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ)ಯಡಿ ನೀಡಲಾಗುವ ಅನುದಾನವನ್ನು ಆಯಾ ಸಮಾಜದ ಬಡಾವಣೆಗಳ ಅಭಿವೃದ್ಧಿಗೆ ಬಳಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.

ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ವಿಜ್ಞಾನ ಭವನದಲ್ಲಿ ಬುಧವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ 2013 ಮತ್ತು ನಿಯಮಗಳು 2014ರ ಕುರಿತು ಜಿಲ್ಲಾ, ತಾಲ್ಲೂಕು ಮತ್ತು ನಗರಪಾಲಿಕೆ ವ್ಯಾಪ್ತಿಯ ಅನುಷ್ಠಾನ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಆಗುವಂತೆ ನೋಡಿಕೊಳ್ಳಬೇಕು. ಅರ್ಹರಿಗೆ ಪ್ರಯೋಜನ ದೊರೆಯುವಂತೆ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ಎಚ್ಚರ ವಹಿಸಬೇಕು

‘ವೈಯಕ್ತಿಕ ಫಲಾನುಭವಿಗಳನ್ನು ಆಯ್ಕೆಯಲ್ಲಿ ಸಮಸ್ಯೆ ಉಂಟಾಗುವುದಿಲ್ಲ. ಆದರೆ, ಲೋಕೋಪಯೋಗಿ, ನೀರಾವರಿ, ಇಂಧನ ಇಲಾಖೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಾಗ ಸಾಮಾನ್ಯ ವರ್ಗದವರ ಬಡಾವಣೆಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಕ್ರಿಯಾಯೋಜನೆ ರೂಪಿಸುತ್ತಿರುವ ಬಗ್ಗೆ ದೂರುಗಳಿವೆ. ಹೀಗಾಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರಿಂದ ದೃಢೀಕರಣ ಪಡೆಯುವಂತೆ ಸೂಚಿಸಲಾಗಿದೆ. ಕ್ರಿಯಾಯೋಜನೆ ಸಿದ್ಧಪಡಿಸುವ ಮುನ್ನವೇ ಬಹಳಷ್ಟು ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದರು.

‘ಮೂರು ತಿಂಗಳಿಗೊಮ್ಮೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಪೋಡಿ ದುರಸ್ತಿ, ನಿವೇಶನ, ಮನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಮಸ್ಯೆಗಳು ಕೇಳಿಬರುತ್ತಿವೆ. ಅನುದಾನವನ್ನು ಈ ಜನರ ಅಭಿವೃದ್ಧಿಗೆ ಬಳಸಲಾಗುತ್ತಿಲ್ಲ ಎಂಬ ದೂರುಗಳೂ ಇವೆ. ಹೀಗಾಗಿ ಪರಿಶೀಲಿಸಿದಾಗ, 3–4 ಕಡೆಗಳಲ್ಲಿ ಸಾಮಾನ್ಯ ವರ್ಗದವರ ಬೀದಿಗಳಲ್ಲಿ ರಸ್ತೆ, ಚರಂಡಿ, ಯುಜಿಡಿ ನಿರ್ಮಾಣಕ್ಕೆ ಅನುದಾನ ಬಳಸಿರುವುದು ತಿಳಿದುಬಂದಿದೆ. ಈ ಕುರಿತು ಇಲಾಖಾ ವಿಚಾರಣೆ ನಡೆಯುತ್ತಿದೆ’ ಎಂದರು.

ಮೀಸಲಾತಿ ಅನುಸರಿಸಿ

‘ಹೊರಗುತ್ತಿಗೆ ಮೇಲೆ ನೌಕರರನ್ನು ನೇಮಿಸಿಕೊಳ್ಳುವಾಗ ಮೀಸಲಾತಿ ಅನುಸರಿಸಬೇಕು. ಆಯಾ ವರ್ಗಕ್ಕೆ ರೋಸ್ಟರ್ ಪ್ರಕಾರ ಕ್ರಮ ಕೈಗೊಳ್ಳಬೇಕು. ಹೊರ ಗುತ್ತಿಗೆ ಏಜೆನ್ಸಿ ಮುಂದುವರಿಸುವಾಗ ಅಧಿಕಾರಿಗಳು ಸೂಕ್ಷ್ಮತೆ ಅರಿಯಬೇಕು’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವಂತೆ ಮಾಡುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ. ಇವುಗಳನ್ನು ಬಳಸಿಕೊಳ್ಳಬೇಕು‘ ಎಂದು ತಿಳಿಸಿದರು.

‘ರಾಜ್ಯ ಸರ್ಕಾರವು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ಜಾರಿಗೊಳಿಸಿದೆ. ಇದರ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಯವರ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಅನುದಾನ ವಾಪಸಾಗದಂತೆ ನೋಡಿಕೊಳ್ಳಬೇಕು. ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಜೈಲು ಶಿಕ್ಷೆಗೆ ಗುರಿಪಡಿಸಲೂ ಅವಕಾಶವಿದೆ. ಹೀಗಾಗಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಮಾಹಿತಿ ನೀಡಿದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಯೋಜನಾ ನಿರ್ದೇಶಕ ಕೆ.ಆರ್.ಶಂಕರ್ ಅಧಿನಿಯಮದ ಕುರಿತು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.