ಮೈಸೂರು: ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಅಷ್ಟು ಕೆಲಸ ಮಾಡಿದರೂ ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರುಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿದ್ದಾರೆ.

ಈ ಮಧ್ಯೆ, ಚಾಮರಾಜನಗರ ಡಿಸಿ ಎಂ.ಆರ್.ರವಿ ವಿರುದ್ದ ವಾಗ್ದಾಳಿ ನಡೆಸಿರುವ ರೋಹಿಣಿ ಸಿಂಧೂರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವಾ ಇನ್ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ.ಈಗ ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನು ದೂಷಿಸಲು ಸಾಧ್ಯವಿಲ್ಲ.ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೇ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ಅದು ಆಗದಿದ್ದರೆ ಮೇಲಧಿಕಾರಿಗಳಿಗೆ ಹೇಳಬೇಕು. ಅದರಲ್ಲಿ ವಿಫಲವಾಗಿರುವ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೆಲ್ಲವು ಸಾಬೀತಾಗಲಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಇದನ್ನೂ ಓದಿ.. ಚಾಮರಾಜನಗರ ಡಿಸಿಯಿಂದ ಸುಳ್ಳು ಆರೋಪ: ಗದ್ಗದಿತರಾದ ರೋಹಿಣಿ ಸಿಂಧೂರಿ

ಈ ಜೊತೆಗೆ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಸಮಯ ಹಾಗೂ ಬಿಲ್ ಸಂಖ್ಯೆಯ ಜೊತೆಗೆ ಮಾಹಿತಿ ಬಹಿರಂಗ ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.