ಮೈಸೂರು: 'ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರ' ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶನಿವಾರ ಹೇಳಿದರು.

ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ₹ 2,578 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಇದು ಯಾರದೋ ಅಸ್ತಿತ್ವಕ್ಕೆ, ಸವಾಲಿಗೆ ಮಾಡುತ್ತಿರುವ ಕಾರ್ಯಕ್ರಮವಲ್ಲ, ಅಭಿವೃದ್ಧಿಯ ಸಭೆ. ಅಧಿಕಾರದಲ್ಲಿ ಇದ್ದಾಗ ನುಡಿದಂತೆ ಕೆಲಸ ಮಾಡದವರು ಈ ಕಾರ್ಯಕ್ರಮದ ಬಗ್ಗೆ ಟೀಕೆ ಮಾಡಿದ್ದಾರೆ. ಆದರೆ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರ' ಎಂದರು.

'ಇಲ್ಲಿ ಜಿಲ್ಲಾ ಆಸ್ಪತ್ರೆ, ಜಯದೇವ ಮೊದಲಾದ ಆಸ್ಪತ್ರೆಗಳನ್ನು ಸ್ಥಾಪಿಸಿದ್ದು, ಈಗ ನಿಮಾನ್ಸ್ ಘಟಕ, ಯುರಾಲಜಿ ಆಸ್ಪತ್ರೆ ಸಹಿತ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಹೊಸ ಬಸ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ' ಎಂದರು.

'ಸಿದ್ದರಾಮಯ್ಯ ಹೋರಾಟದ ರಾಜಕೀಯದ ಮೂಲಕ ಸಮ ಸಮಾಜ ನಿರ್ಮಾಣ ಮಾಡುತ್ತಿದ್ದು, ಅದಕ್ಕೆ ಪ್ರೇರಣೆಯಾಗಿ ಕಾಂಗ್ರೆಸ್ ಸರ್ಕಾರ ನಿಂತಿದೆ' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಶರಣಬಸಪ್ಪ ದರ್ಶನಾಪುರ, ಶಿವರಾಜ ತಂಗಡಗಿ, ರಹೀಂ ಖಾನ್, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ರವಿಶಂಕರ್, ಕೆ. ಹರೀಶ್ ಗೌಡ, ಟಿ. ಗುರುಮೂರ್ತಿ, ಪುಟ್ಟರಂಗ ಶೆಟ್ಟಿ, ಗಣೇಶ ಪ್ರಸಾದ್, ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.