ಮೈಸೂರು: ‘ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಪ್ರಾಪ್ತಿಯಾಗಲಿ’ ಎಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗಾಂಧಿ ವೃತ್ತದ ಬಳಿ ಶನಿವಾರ ಸತ್ಯಾಗ್ರಹ ನಡೆಸಿದರು.

ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಕೆ.ಬಿ.ಭಾಗ್ಯರಾಜು ಮಾತನಾಡಿ, ‘ಡಿಕೆಶಿ ನಲವತ್ತು ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಜೀವನ, ಜೀವವನ್ನು ತ್ಯಾಗ ಮಾಡಿದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದರಿಂದ 2028ರ ಚುನಾವಣೆಗೂ ಸಹಾಯವಾಗಲಿದೆ’ ಎಂದರು.

‘ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯದಿದ್ದರೆ ಹೋರಾಟ ತೀವ್ರಗೊಳಿಸಲಿದ್ದೇವೆ. ಪಂಚ ರಾಜ್ಯ ಚುನಾವಣೆಯಲ್ಲೂ ಈ ಅಂಶ ಪರಿಣಾಮ ಬೀರಲಿದೆ. ಹೀಗಾಗಿ ಪಕ್ಷ ತಕ್ಷಣವೇ ಎಚ್ಚೆತ್ತುಕೊಂಡು, ಕಾರ್ಯಕರ್ತರ ಕೂಗಿಗೆ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-39-1796405816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.