ಮೈಸೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು. ವಿವಿಧ ದೇವಾಲಯಗಳಲ್ಲಿ ಅಭಿಮಾನಿಗಳು ಡಿಕೆಶಿ ಹೆಸರಿನಲ್ಲಿ ಪೂಜೆ ಸಲ್ಲಿಸಿದರು

ಇಂದಿರಾ ಕಾಂಗ್ರೆಸ್ ಭವನದಲ್ಲಿ ಪದಗ್ರಹಣ ಸಮಾರಂಭದ ವೀಕ್ಷಣೆಗಾಗಿ ಎಲ್ಇಡಿ ಪರದೆ ಹಾಕಲಾಗಿತ್ತು. ಡಿಕೆಶಿ ಅವರು ಪರದೆಯಲ್ಲಿ ಕಾಣಿಸುತ್ತಿದ್ದಂತೆ ಕಾರ್ಯಕರ್ತೆಯರು ಆರತಿ ಬೆಳಗಿದರು. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೈಕಾರ ಕೂಗಿದರು. ಪಕ್ಷದ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಾಗ ಹರ್ಷ ವ್ಯಕ್ತಪಡಿಸಿದರು. ಯತೀಂದ್ರ ಸಿದ್ದರಾಮಯ್ಯ ಅವರ ಸರದಿ ಬಂದಾಗ ಜೈಕಾರದ ಕೂಗು ಮುಗಿಲು ಮುಟ್ಟಿತು. ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್ ಮೊದಲಾದವರು ಪಾಲ್ಗೊಂಡಿದ್ದರು.

ಕೋಟೆ ಆಂಜನೇಯ ದೇವಾಲಯದ ಮುಂಭಾಗ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಅವರ ಫೋಟೊ ಪ್ರದರ್ಶಿಸಿ ಜೈಕಾರ ಕೂಗಿದರು.

ಇಟ್ಟಿಗೆಗೂಡು ವೃತ್ತದಲ್ಲಿ ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮುಖಂಡ ಕೃಷ್ಣೇಗೌಡ ಮಾತನಾಡಿ, ‘ಡಿಕೆಶಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯವು ಅಭಿವೃದ್ಧಿಯತ್ತ ಮುನ್ನಡೆಯಲಿ ಹಾಗೂ ಜನಪರ ಆಡಳಿತಕ್ಕೆ ಹೊಸ ದಿಕ್ಕು ದೊರೆಯಲಿ. ರಾಜ್ಯದ ಸಮಗ್ರ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತ ಮತ್ತು ಸಮಾಜದ ಎಲ್ಲಾ ವರ್ಗಗಳ ಪ್ರಗತಿಗೆ ಅವರ ನಾಯಕತ್ವ ಸಹಕಾರಿಯಾಗಲಿ’ ಎಂದು ಹೇಳಿದರು.

ಮುಖಂಡರಾದ ನಿಂಗಣ್ಣ, ಶಂಕರ್, ಧರ್ಮ, ಮಂಜಣ್ಣ ಇದ್ದರು.

ಸಾರ್ವಜನಿಕರಿಗೆ ಸಿಹಿ ವಿತರಣೆ: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದವರು ವಿಜಯೋತ್ಸವ ಆಚರಿಸಿದರು. ಸಾರಿಗೆ ಬಸ್ಗಳ ಪ್ರಯಾಣಿಕರು, ಚಾಲಕರು ಹಾಗೂ ನಿರ್ವಾಹಕರಿಗೆ ಸಿಹಿ ನೀಡಿದರು. ವಾಹನ ಚಾಲಕರು, ಸವಾರರು, ಸಾರ್ವಜನಿಕರಿಗೆ ಸಹಿ ಹಂಚಿದರು.

ಬಳಗದ ಮೈಸೂರು ಘಟಕದ ಅಧ್ಯಕ್ಷ ಜಿ. ರಾಘವೇಂದ್ರ, ಶೇಖರ್, ಕಿರಣ್,ಎಸ್.ಎನ್. ರಾಜೇಶ್, ರವಿಚಂದ್ರ, ಚಂದ್ರು, ಲಕ್ಷ್ಮಣ, ನಾಗರಾಜು, ಮುಸಿರಾ, ಚಂದ್ರು, ಮಂಜು, ವಿನೋದ್, ಮಾಯಣ್ಣ, ಪೂಜಾರಿ ನಟರಾಜ್, ಅನಿಲ್, ಯೋಗೇಶ್ ನಾಯ್ಡು, ಹರೀಶ್, ರಾಕೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-39-831046585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.