ಜಯಪುರ: ಮೈಸೂರು ತಾಲ್ಲೂಕು ದಡದಕಲ್ಲಹಳ್ಳಿಯಲ್ಲಿ ₹4.83 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಟಿ ದೇವೇಗೌಡ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಗ್ರಾಮದಲ್ಲಿ ₹80 ಲಕ್ಷ ವೆಚ್ಚದಲ್ಲಿ ಗ್ರಾಮದ ಪರಿಮಿತಿಯ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ಹೊಸಕೋಟೆಯಿಂದ ಯಾಚೇನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ₹3 ಕೋಟಿ ವೆಚ್ಚ, ಯಾಚೇನಹಳ್ಳಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿಗೆ ₹23 ಲಕ್ಷ ವೆಚ್ಚ, ಹೊಸಕೋಟೆ ಗ್ರಾಮದಲ್ಲಿ ₹80 ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ದಡದಕಲ್ಲಹಳ್ಳಿ ಗ್ರಾಮದ ಕೆಲವು ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆಯಾಗುತ್ತಿದ್ದು, ನಿರಂತರ ವಿದ್ಯುತ್ ಸಂಪರ್ಕವನ್ನು ಒದಗಿಸಲು ಗ್ರಾಮಸ್ಥರು ಶಾಸಕರಿಗೆ ಸಮಸ್ಯೆ ಹೇಳಿಕೊಂಡರು.

ಆಗ ಶಾಸಕರು ಸೆಸ್ಕ್ನ ಅಧೀಕ್ಷಕ ಎಂಜಿನಿಯರ್ಗಳಿಗೆ ದೂರವಾಣಿ ಕರೆ ಮಾಡಿ ಕೂಡಲೇ ಸದರಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಒದಗಿಸಲು ಸೂಚಿಸಿದರು.

ಯಾಚೇಗೌಡನಹಳ್ಳಿಯಿಂದ ಕಾವೇರಿ ಹಿನ್ನೀರಿಗೆ ಹೋಗುವ ರಸ್ತೆ ಹಾಳಾಗಿದ್ದು, ರಸ್ತೆ ಅಭಿವೃದ್ಧಿಪಡಿಸಿಕೊಡುವಂತೆ ಅಲ್ಲಿನ ರೈತರು ಕೋರಿದರು.

ರೈತರ ಮನವಿಗೆ ಸ್ಪಂದಿಸಿದ ಶಾಸಕರು, ‘ಮುಂದಿನ ಅನುದಾನದಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ಗ್ರಾಮದಲ್ಲಿ ಬಸ್ ಸೌಲಭ್ಯ ಕುರಿತು ಅಲ್ಲಿನ ಶಾಲಾ ಮಕ್ಕಳು ತಿಳಿಸಿದಾಗ ಕೂಡಲೇ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಅವರಿಗೆ ಮೊಬೈಲ್ ಫೋನ್ ಕರೆ ಮಾಡಿ ಕೂಡಲೇ ಬಸ್ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.

‘ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮನವಿಗೆ ಶಾಸಕರ ಅನುದಾನದಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಸ್.ನಾಗರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗಮೂರ್ತಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಲೋಕೇಶ್, ಮುಖಂಡರಾದ ವೀರಭದ್ರಸ್ವಾಮಿ, ಸಿದ್ದಲಿಂಗಪ್ಪ, ಕಲರ್ ಮಂಜು, ಮುಕುಂದ, ವೆಂಕಟೇಶ್, ಸೋಮಶೇಖರ್, ನಾಗೇಂದ್ರ, ಯಾಚೇಗೌಡನಹಳ್ಳಿ ನಂಜುoಡೇಗೌಡ, ಮಲ್ಲೇಶ್, ಶಿವಣ್ಣ, ತಿಲಕ್, ಶರತ್, ಪರಶುರಾಮ್, ಹೊಸಕೋಟೆ ತಿಮ್ಮೇಗೌಡ, ಕೆಂಪೇಗೌಡ, ಬಸವರಾಜು, ರಾಮಕೃಷ್ಣೇಗೌಡ, ವೆಂಕಟೇಶ್, ಮಾಜಿ ಉಪಾಧ್ಯಕ್ಷರಾದ ಮಹದೇವು, ಪುನೀತ್ ಗೌಡ ಶಿವರಾಮು, ಲೋಕೇಶ್, ರಘು. ಲೋಕೇಶ್, ಯೋಗೇಶ್ ಹಾಗೂ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-516669106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.