ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಹೆಬ್ಬಾಳು 1ನೇ ಹಂತದ ನಿವಾಸಿ ಪ್ರಮೋದ್ ಕುಮಾರ್.ಎಚ್.ಟಿ (27)ಗೆ 5ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಪ್ರಮೋದ್ ಕುಮಾರ್.ಎಚ್.ಟಿ ಹಾಗೂ ಪೂಜಾ ಮದುವೆ ಆದಾಗಿನಿಂದಲೂ ತಂದೆ ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಹಿಂಸೆ ನೀಡುತ್ತಿದ್ದ. ಮಾತಿನ ನಡುವೆ ಸಾಯುವಂತೆ ಪ್ರೇರಣೆ ನೀಡುತ್ತಿದ್ದ. 2014ರ ಸೆ.20ರ ಮಧ್ಯಾಹ್ನ 12.30ಕ್ಕೆ ಪೂಜಾ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಬಗ್ಗೆ ಪೂಜಾ ಕುಟುಂಬ ಪ್ರಮೋದ್ ವಿರುದ್ಧ ದೂರು ನೀಡಿದ್ದರು. ವಿಜಯನಗರ ಠಾಣೆಯ ಅಂದಿನ ಇನ್ಸ್ಪೆಕ್ಟರ್ ರವಿ.ಸಿ.ವಿ ತನಿಖೆ ಮಾಡಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ನ್ಯಾಯಾಧೀಶೆ ರೂಪಾ.ಕೆ.ಎನ್ ವಿಚಾರಣೆ ನಡೆಸಿ, ಪ್ರಮೋದ್ಗೆ ವರದಕ್ಷಿಣೆ ನಿಷೇಧ ಕಾಯ್ದೆ ಅಡಿಯ ಅಪರಾಧಗಳಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 2.35 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಬಿ.ಈ.ಯೋಗೇಶ್ವರ ಮತ್ತು ಎ.ಎನ್.ಮಧು ಸರ್ಕಾರದ ಪರ ವಾದ ಮಂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-36-1993058233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.