ಮೈಸೂರು: ‘ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ಏಪ್ರಿಲ್ ಹಾಗೂ ಮೇನಲ್ಲಿ (ಈವರೆಗೆ) ಮಳೆಯ ಕೊರತೆ ಉಂಟಾಗಿದ್ದು, ಮುಂದೆಯೂ ಸರಿಯಾಗಿ ಬಾರದಿದ್ದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅದನ್ನು ಸಮರ್ಥವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಮಿತವಾಗಿ ಬಳಸಿ, ಪೋಲು ಮಾಡಬೇಡಿ: ‘ಅಣೆಕಟ್ಟಿನಲ್ಲಿ ಸದ್ಯ ಲಭ್ಯವಿರುವ ನೀರಿನ ಆಧಾರದ ಮೇಲೆ ಜುಲೈವರೆಗೆ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ. ಆದರೆ, ಈಗಿನಿಂದಲೇ ಮಿತವಾಗಿ ಬಳಸಬೇಕು, ಪೋಲಾಗದಂತೆ ಎಚ್ಚರ ವಹಿಸಬೇಕು’ ಎಂದರು.

‘ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ತೊಂದರೆ ಆಗುವ ಸ್ಥಳಗಳನ್ನು ಗುರುತಿಸಿ, ಸಮೀಪದಲ್ಲಿ ಲಭ್ಯವಿರುವ ಖಾಸಗಿ ಬೋರ್ವೆಲ್ಗಳ ಪಟ್ಟಿ ಮಾಡಿಕೊಳ್ಳಬೇಕು. ಅವಶ್ಯಕತೆ ಬಿದ್ದಾಗ ಅಲ್ಲಿಂದ ನೀರು ಪಡೆದು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

‘ಸಾರ್ವಜನಿಕರು ಕುಡಿಯುವ ನೀರಿನ ತೊಂದರೆಯ ಬಗ್ಗೆ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ಕರೆ ಮಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಬೇಕು. ತೊಂದರೆ ಇರುವ ಸ್ಥಳ ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ, ಸಮಸ್ಯೆ ಗಂಭೀರವಾಗುತ್ತದೆ. ಅದಕ್ಕೆ ಅವಕಾಶ ಕೊಡಬಾರದು’ ಎಂದು ತಾಕೀತು ಮಾಡಿದರು.

ಭೇಟಿ ನೀಡಬೇಕು: ‘ಬೋರ್ ವೆಲ್ಗಳ ಪುನಶ್ಚೇತನ, ಹೊಸದಾಗಿ ಕೊರೆಯುವುದು, ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪ್ಲೈನ್ ಜೋಡಣೆ ಮೊದಲಾದ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಮಸ್ಯೆ ಉಲ್ಭಣಗೊಳ್ಳುವ ಮೊದಲೇ ಪರಿಹರಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್, ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ, ಅಗ್ನಿಶಾಮಕ ಅಧಿಕಾರಿ ಗುರುರಾಜ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-38-1471642187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.