ಮೈಸೂರು: ‘ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸಬೇಕು’ ಎಂದು ಎಎಸ್ಪಿ ಸಿ. ಮಲ್ಲಿಕ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಡ್ರಗ್ಸ್ ಬಳಕೆ ಅಪರಾಧ ಎಂಬ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಯಾರಾದರೂ ಮತ್ತಿನಲ್ಲಿ ಇರುವ ಬಗ್ಗೆ ಅನುಮಾನ ಬಂದಲ್ಲಿ ಪರೀಕ್ಷೆಗೆ ಒಳಪಡಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಅಬಕಾರಿ ಇಲಾಖೆಯವರು ನಿಯಮಿತವಾಗಿ ದಾಳಿ ನಡೆಸಬೇಕು. ಕೃಷಿ ಜಮೀನಿನಲ್ಲಿ, ಮನೆಯ ಹಿತ್ತಲಿನಲ್ಲಿ, ಇತರ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಇರುತ್ತದೆ. ನಿಯಮಿತವಾಗಿ ಕಾರ್ಯಾಚರಣೆ ನಡೆಸಿದರೆ, ಗಾಂಜಾ ಗಿಡ ಬೆಳೆಯುವುದನ್ನು ತಡೆಯಬಹುದಾಗಿದೆ’ ಎಂದು ತಿಳಿಸಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಬೀಡಿ, ಸಿಗರೇಟು ಸೇದುವ ವ್ಯಕ್ತಿಯೊಂದಿಗೆ ಪಕ್ಕದಲ್ಲಿ ಇರುವವರ ಆರೋಗ್ಯವೂ ಹಾಳಾಗುತ್ತದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಕಂಡುಬಂದರೆ ದಂಡ ವಿಧಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಬೇಕು’ ಎಂದು ಸೂಚಿಸಿದರು.

‘ಮದ್ಯವ್ಯಸನಿಗಳನ್ನು ಅದರಿಂದ ಹೊರತರಲು ಪುನರ್ವಸತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹಲವರು ಇಂತಹ ಕೇಂದ್ರಗಳಿಗೆ ಸೇರಿ ವ್ಯಸನವನ್ನು ತ್ಯಜಿಸಿದ್ದಾರೆ’ ಎಂದರು.

‘ಹೋದ ತಿಂಗಳು 71 ಪ್ರಕರಣಗಳಲ್ಲಿ 80 ಜನರ ಮೇಲೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಡಿಸಿಪಿ ಕೆ.ಎಸ್. ಸುಂದರ್ರಾಜ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.