ಮೈಸೂರು: ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಪದ್ಮಶ್ರೀ ಕನ್ವೆನ್ಷನ್ ಹಾಲ್ ಪಕ್ಕದ ರಸ್ತೆಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ₹50 ಸಾವಿರ ಮೌಲ್ಯದ 1.98 ಕೆ.ಜಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ.

ಎಸಿಪಿ ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ನರಸಿಂಹರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ, ಸಬ್ ಇನ್ಸ್ಪೆಕ್ಟರ್ ನಾಗರಾಜ ನಾಯ್ಕ್.ಬಿ.ಜಿ ಮತ್ತು ಗೋಪಾಲ.ಎಸ್.ಪಿ., ಎ.ಎಸ್.ಐ ಗಳಾದ ನಿಂಗರಾಜು, ಅನಿಲ್ ಶಂಕಪಾಲ್. ಸಿಬ್ಬಂದಿ ರಮೇಶ್, ಸುರೇಶ್ ಡಿ.ಎಸ್, ಜೀವನ್, ಹರೀಶ್, ಅಬಿಷೇಕ್ ಎಂ, ಮಾರುತಿ ಪವನ್, ರಾಜುಸಾಬ್ ಮುಲ್ಲಾ ಕಾರ್ಯಾಚರಣೆ ನಡೆಸಿದ್ದರು.

ಮೈಸೂರು: ಲಷ್ಕರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣ ಬೆನ್ನತ್ತಿದ ಪೊಲೀಸರು ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಮಿಳುನಾಡಿನ ಪಂಜವರ್ಣಮ್, ಸುಮದಿ ಹಾಗೂ ರಘು ಬಂಧಿತ ಆರೋಪಿಗಳು. ಅವರಿಂದ ₹ 16.50 ಲಕ್ಷ ಮೌಲ್ಯದ 125 ಗ್ರಾಂ ಚಿನ್ನದ ಆಭರಣ ಅಮಾನತುಪಡಿಸಲಾಗಿದೆ.

‘ಜ.24ರಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರ್ಮ್-10ರಲ್ಲಿ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿರುವ ಬಗ್ಗೆ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನದಿಂದ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಠಾಣೆಯ ಇತರೆ ಎರಡು ಪ್ರಕರಣಗಳಿಗೆ ಸಂಬಂಧಿಸಿದ 22 ಗ್ರಾಂ ಚಿನ್ನದ ನೆಕ್ಲೇಸ್ ಹಾಗೂ 56 ಗ್ರಾಂ ತೂಕದ ಚಿನ್ನದ ಆಭರಣಗಳು ಪತ್ತೆಯಾಗಿದೆ’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-39-557498226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.