ಮೈಸೂರು: ‘ಮಾದಕ ವಸ್ತು ಸೇವನೆ ಸಮಾಜಕ್ಕೆ ಮಾರಕವಾಗಿದ್ದು, ಅವುಗಳ ಮಾರಾಟ ಮತ್ತು ಸೇವನೆ ತಡೆಗೆ ಜಾಗೃತಿ ಕಾರ್ಯಕ್ರಮ ರೂಪಿಸಿ’ ಎಂದು ಎಡಿಎಸ್ಪಿ ಸಿ.ಮಲ್ಲಿಕ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮಾದಕ ದ್ರವ್ಯಗಳ ಸಮನ್ವಯ (ಎನ್ಸಿಒಆರ್ಡಿ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಜೂನ್ 26 ರಂದು ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ವಿವಿಧ ಇಲಾಖೆ ಮೂಲಕ ಕಾಲೇಜು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಅರಿವು ಕಾರ್ಯಕ್ರಮ ಆಯೋಜಿಸಿ’ ಎಂದರು.

‘ಧೂಮಪಾನ ಸೇವನೆಯಿಂದ ಧೂಮಪಾನ ಮಾಡುವ ವ್ಯಕ್ತಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಅವರ ಜೊತೆ 5 ರಿಂದ 6 ಗಂಟೆ ಇರುವವರ ಮೇಲೂ ಪರಿಣಾಮ ಬೀರುತ್ತದೆ. ಮೇ 31 ರಂದು ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮವಿದ್ದು, ಆ ಸಮಯದಲ್ಲೂ ಜಾಗೃತಿ ಕಾರ್ಯಕ್ರಮ ಆಯೋಜಿಸಿ’ ಎಂದು ಹೇಳಿದರು.

‘ಚೆಂಡು ಹೂ ಹಾಗೂ ತೊಗರಿ ಗಿಡಗಳ ಮಧ್ಯೆ ಗಾಂಜಾ ಗಿಡ ಬೆಳೆಯುವ ಸಾಧ್ಯತೆ ಹೆಚ್ಚಿದ್ದು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿದಾಗ ಈ ಬಗ್ಗೆಯೂ ಪರಿಶೀಲಿಸಿ. ಜಿಲ್ಲೆಯಲ್ಲಿ ಬಹಳಷ್ಟು ಖಾಸಗಿ ವ್ಯಸನ ಮುಕ್ತ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳ ಕಾರ್ಯನಿರ್ವಹಣೆಗೆ ಇರುವ ಷರತ್ತುಗಳು ಹಾಗೂ ಅವುಗಳ ಪಾಲನೆಯ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು’ ಎಂದು ತಿಳಿಸಿದರು.

‘ಹಾಸ್ಟೆಲ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆ ಹಾಗೂ ಅವರ ವರ್ತನೆಯ ಬದಲಾವಣೆಗಳು ಹಾಗೂ ವಿದ್ಯಾರ್ಥಿಗಳು ಹೊರಗಿನಿಂದ ಪಾರ್ಸೆಲ್ ಮೂಲಕ ಖರೀದಿಸುವ ಆಹಾರ ಪದಾರ್ಥಗಳ ಬಗ್ಗೆ ನಿಗಾವಹಿಸಿ’ ಎಂದರು.

ಆರೋಗ್ಯ ಇಲಾಖೆಯ ಕೋಟ್ಪ್ ವಿಭಾಗದಿಂದ ಏಪ್ರಿಲ್ ತಿಂಗಳಲ್ಲಿ 561 ದೂರು ದಾಖಲಿಸಿ ₹ 1.25 ಲಕ್ಷ ದಂಡ ಸಂಗ್ರಹಿಸಲಾಗಿದೆ. ಅಬಕಾರಿ ಇಲಾಖೆಯು ಮೈಸೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 20 ಎನ್ಡಿಪಿಎಸ್ ಪ್ರಕರಣ ದಾಖಲಿಸಿ 14 ಆರೋಪಿಗಳನ್ನು ಬಂಧಿಸಿ, 58. 335 ಕೆ.ಜಿ. ಗಾಂಜಾ ಹಾಗೂ 50 ಹಸಿ ಗಾಂಜಾ ಗಿಡ ವಶಪಡಿಸಿಕೊಂಡಿದೆ ಎಂದು ಆಯಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯ ಎಸಿಪಿ ಮನೋಜ್ ಕುಮಾರ್, ಸಹಾಯಕ ಔಷಧ ನಿಯಂತ್ರಕರಾದ ಆಶಾಲತಾ, ವಾಸೀಂ ಷರೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-39-856272933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.