ಮೈಸೂರು: ‘ಔಷಧಿಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೇ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಎಚ್ಚರಿಕೆ ನೀಡಿದರು.

ನಗರದ ನ್ಯೂ ಸ್ಯಾಯಜಿರಾವ್ ರಸ್ತೆಯಲ್ಲಿರುವ ರಘುಲಾಲ್ ಔಷಧಿ ಮಾರಾಟ ಮಳಿಗೆಗೆ ಬುಧವಾರ ದಿಢೀರ್ ಭೇಟಿ ನೀಡಿ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ 1940ರ ಅನುಸೂಚಿ ‘ಎಚ್’, ‘ಎಚ್1’ ಹಾಗೂ ‘ಎಕ್ಸ್’ ಅಡಿಯಲ್ಲಿ ಬರುವ ಔಷಧಿಗಳ ಮಾರಾಟದ ಬಿಲ್ಗಳು, ವೈದ್ಯರ ಸಲಹಾ ಚೀಟಿಗಳನ್ನು ಪಡೆದು ಪರಿಶೀಲನೆ ನಡೆಸಿದರು.

‘ಮತ್ತು ಬರಿಸುವ ಹಾಗೂ ಅಮಲುಕಾರಕ ಔಷಧಿಗಳನ್ನು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಮಾರಬಾರದು. ಅಮಲುಕಾರಕ ಔಷಧಿಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆ ಖರೀದಿಸಿ ಯುವಜನರು ಮಾದಕ ವಸ್ತುಗಳ ಬಳಕೆಯ ಜಾಲದಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ, ಮಾರಾಟ ಮಳಿಗೆಗಳು ಜಿಲ್ಲಾಡಳಿತ ಹಾಗೂ ಸರ್ಕಾರದಿಂದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವೈದ್ಯರ ಸಲಹಾ ಚೀಟಿ ಕಡ್ಡಾಯ ಎಂದು ಪ್ರಕಟಿಸಬೇಕು’ ಎಂದರು.

‘ಔಷಧಿಗಳ ಸ್ಟಾಕ್, ಮಾರಾಟ, ವೈದ್ಯರ ಸಲಹಾ ಚೀಟಿ ಹಾಗೂ ಬಿಲ್ಗಳ ದಾಖಲೆಗಳನ್ನು ಇಟ್ಟುಕೊಂಡಿರಬೇಕು. ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಹಾಜರುಪಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ‘ಜಿಲ್ಲೆಯಲ್ಲಿ ಬಹಳಷ್ಟು ಔಷಧಿ ಮಾರಾಟ ಕೇಂದ್ರಗಳಿವೆ. ಎಲ್ಲವನ್ನೂ ಔಷಧೀಯ ನಿಯಂತ್ರಕರು ಪರಿಶೀಲಿಸುವುದು ಕಷ್ಟಸಾಧ್ಯ. ಹೀಗಾಗಿ, ಪೊಲೀಸ್ ಇಲಾಖೆಯಿಂದಲೂ ಪರಿಶೀಲನೆ ತೀವ್ರಗೊಳಿಸಲಾಗುವುದು’ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಹಾಯಕ ಔಷಧ ನಿಯಂತ್ರಕರಾದ ಆಶಾ ಲತಾ ಹಾಗೂ ವಾಸೀಂ ಶರೀಫ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-39-1840665089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.