ಮೈಸೂರು: ‘ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್ ಪೂರೈಸುವ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಪ್ರತಿತಾಲ್ಲೂಕುಗಳಲ್ಲೂ ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪಿಸಿ, ಹೆಚ್ಚುವರಿಯಾಗಿ ಸಂಗ್ರಹಿಸಲಾಗಿದೆ’ ಎಂದುಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ತಿಳಿಸಿದೆ.

‘ಸೆಸ್ಕ್’ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲೂ, ಟ್ರಾನ್ಸ್ಫಾರ್ಮರ್ಗಳಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿಯಾಗಿ ನಿಗಮದ ವಿವಿಧ ದಾಸ್ತಾನು ಕೇಂದ್ರಗಳಲ್ಲಿ ಬಫರ್ಸ್ಟಾಕ್ ಸಂಗ್ರಹಿಸಲಾಗಿದೆ. ಇದರಿಂದ ಆಯಾ ತಾಲ್ಲೂಕಿನ ಯಾವುದೇ ಪ್ರದೇಶದಲ್ಲಿರುವ ವಿದ್ಯುತ್ಪರಿವರ್ತಕಗಳಲ್ಲಿ ದೋಷ ಉಂಟಾದರೂ ತ್ವರಿತವಾಗಿ ಬದಲಾವಣೆ ಅಥವಾ ದುರಸ್ತಿ ಕಾರ್ಯ ಕೈಗೊಳ್ಳಲು ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದೆ.

‘ಮುಂಗಾರಿನಲ್ಲಿ ಮಳೆ ಹಾಗೂ ಗಾಳಿಯಿಂದಾಗಿ ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗುವ ಸಾಧ್ಯತೆಯೂ ಹೆಚ್ಚಾಗಿರುವುದರಿಂದ, ಅವುಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ವಹಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಮತ್ತು ರೈತರು ಪರಿವರ್ತಕಗಳಲ್ಲಿ ದೋಷ ಕಂಡುಬಂದಲ್ಲಿ ತಕ್ಷಣವೇ 24x7 ಸಹಾಯವಾಣಿ 1912 ಅಥವಾ ಸಮೀಪದ ಸೇವಾ ಕೇಂದ್ರಗಳಿಗೆ ಮಾಹಿತಿ ನೀಡಬೇಕು’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-38-721792189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.