ಮೈಸೂರು: ಆನೆ ದಂತ ಮಾರಾಟ ಜಾಲ ವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪತ್ತೆ ಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕರ್ನಾಲ್ ಗ್ರಾಮದ ನಿವಾಸಿ ಸೈಯದ್ ಫಯಾಜ್, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಮುನೀರ್ ಹಾಗೂ ಅನ್ಸಾರ್ ಅಲಿಯಾಸ್ ಗುರು ಮತ್ತು ಮೈಸೂರಿನ ರೂಪಾ ಬಂಧಿತರು.

‘ನಾಗ್ಪುರದ ಕಂದಾಯ ಗುಪ್ತಚರ ನಿರ್ದೇಶನಾಲಯವು ದಂತ ಮಾರಾಟದ ಕುರಿತು ಮಾಹಿತಿ ನೀಡಿತ್ತು. ರಾಮಕೃಷ್ಣ ನಗರದ ‘ಐ’ ಬ್ಲಾಕ್ನ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ಮಾಡಿದಾಗ 3 ಆನೆ ದಂತದ ತುಂಡು ಇರುವುದು ಗೊತ್ತಾಯಿತು. ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದೆವು. ಅವರ ವಿಚಾರಣೆ ವೇಳೆ ದೊರೆತ ಮಾಹಿತಿ ಅಧರಿಸಿ ಮತ್ತೊಬ್ಬ ಆರೋಪಿಯನ್ನು ಕೊಳ್ಳೇಗಾಲದಲ್ಲಿ ಬಂಧಿದ್ದೇವೆ. ರೂಪಾ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದರು’ ಎಂದು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಪರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-39-1285904437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.