ತಿ.ನರಸೀಪುರ: ‘ನೈಸರ್ಗಿಕ ಸಂಪತ್ತನ್ನು ಮಿತವಾಗಿ ಬಳಸುವುದರ ಜತೆಗೆ ಭೂಮಿಯ ಪರಿಸರವನ್ನು ಸಂರಕ್ಷಿಸಬೇಕು’ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಜಿ.ಎಚ್.ಹನುಮಂತ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವ ಭೂ ದಿನದ ಅಂಗವಾಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಹಾಗೂ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನೈಸರ್ಗಿಕ ಸಂಪನ್ಮೂಲಗಳನ್ನು ಅನಾವಶ್ಯಕ ಬಳಕೆ ಮಾಡಿದರೆ ಮುಂದಿನ ಪೀಳಿಗೆಯ ಜನರಿಗೆ ಕೊರತೆಯಾಗಬಹುದು. ಪ್ರಸ್ತುತ ದಿನದಲ್ಲಿ ಭೂಮಿಯ ಮಹತ್ವ ಪ್ರತಿಯೊಬ್ಬರೂ ತಿಳಿಯುವ ಅಗತ್ಯವಿದೆ. ಗಿಡಗಳನ್ನು ನೆಟ್ಟು ಪರಿಸರ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಂಕಲ್ಪ ಮಾಡೋಣ’ ಎಂದರು.

ಸಿವಿಲ್ ನ್ಯಾಯಾಧೀಶರಾದ ಸಚಿನ್ ಎಚ್.ಆರ್, ಎನ್.ನಿವೇದಿತಾ, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಮಹದೇವಸ್ವಾಮಿ, ಖಜಾಂಚಿ ಮಹದೇವಸ್ವಾಮಿ, ವಕೀಲರಾದ ಮಾದಪ್ಪ, ಜಯದೇವಣ್ಣ, ಬಿ.ಎಂ.ಶಿವಣ್ಣ, ಸೋಮಶೇಖರ ಮೂರ್ತಿ, ಶಂಭುಲಿಂಗಸ್ವಾಮಿ, ಎಚ್.ಎನ್.ಬಿ. ನಿಧಿ, ಮಂಜುನಾಥ್, ಸಿದ್ದರಾಜು, ಬಸವರಾಜು, ವಿನಯ್ ಕುಮಾರ್, ಜಯಪ್ರಕಾಶ್, ಕೇಶವಮೂರ್ತಿ, ವಕೀಲ ಪಾಲಾಕ್ಷ ಮೂರ್ತಿ, ಶಿರಸ್ತೇದಾರ್ ಪ್ರೇಮಲತಾ, ಸತೀಶ್ ಕುಮಾರ್, ಅನಿತಾ ಕುಮಾರಿ, ಚಂಪಕಲಾ, ತಾಲ್ಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಮಾದಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-38-1613302383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.