ಮೈಸೂರು: ‘ಆಳುವ ವರ್ಗವು ರೈತರು ಹಾಗೂ ಕಾರ್ಮಿಕರ ಮೇಲಿನ ಶೋಷಣೆಯನ್ನು ತಪ್ಪಿಸಬೇಕು’ ಎಂದು ಮಹಾರಾಜ ಕಾಲೇಜು ಸಹಾಯಕ ಪ್ರಾಧ್ಯಾಪಕ ಎಸ್. ಕೃಷ್ಣಪ್ಪ ಆಗ್ರಹಿಸಿದರು.

ನಗರದಲ್ಲಿ ಕಾರ್ಮಿಕರ ಹಕ್ಕುಗಳ ಸೇವಾ ಸಮಿತಿಯು ಭಾನುವಾರ ಏರ್ಪಡಿಸಿದ್ದ ಕಾರ್ಮಿಕರ ಕಾರ್ಯಾಗಾರ, ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಸಂಘಟಿಕ ಕಾರ್ಮಿಕರ ಜೀವನೋಪಾಯಕ್ಕೆ ರಾಜ್ಯ ಸರ್ಕಾರ ನೆರವಾಗಬೇಕು. ಬಹಳಷ್ಟು ಕಾರ್ಮಿಕರು ಉದ್ಯೋಗ ಭದ್ರತೆ ಇಲ್ಲದೇ ದುಡಿಯುತ್ತಿದ್ದಾರೆ. ಅಂಥವರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಬೇಕು’ ಎಂದರು.

ಮುಖ್ಯಅತಿಥಿಯಾಗಿದ್ದ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಚೋಂದಮ್ಮ ಪೂಣಚ್ಚ, ‘ಕಾರ್ಮಿಕರ ಶೋಷಣೆ ನಿಲ್ಲಬೇಕು. ಇದಕ್ಕಾಗಿ ಅವರಿಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ಜಾಗೃತಿ ಮೂಡಿಸಲು: ಕಾರ್ಮಿಕರ ಹಕ್ಕುಗಳ ಸೇವಾ ಸಮಿತಿ ಅಧ್ಯಕ್ಷ ಆರ್. ಶ್ರೀನಿವಾಸ್, ‘ ‘ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಇನ್ನೂ ಹಲವು ಕಾರ್ಖಾನೆಗಳು ನೀಡುತ್ತಿಲ್ಲ. ಇದರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಸಂಸ್ಕೃತಿ ಚಿಂತಕ ಕೆ. ರಘುರಾಂ ವಾಜಪೇಯಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಚೋಂದಮ್ಮ ಪೂಣಚ್ಚ ಹಾಗೂ ಎಸ್. ಕೃಷ್ಣಪ್ಪ ಅವರಿಗೆ ‘ಕರ್ನಾಟಕ ಸೇವಾರತ್ನ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಎಸ್. ಸುಜಾತಾ ಜಯಕುಮಾರ್ ಪ್ರಾರ್ಥಿಸಿದರು. ಕಸ್ತೂರಿ ಚಂದ್ರು ನಿರೂಪಿಸಿದರು. ‘ಗಾನನಂದನ’ ತಂಡದ ಅಧ್ಯಕ್ಷ ಎನ್. ಬೆಟ್ಟೇಗೌಡ, ರಾಣಿ ಗೌಡ, ಚಲುವರಾಜು, ಭಾಗ್ಯಮ್ಮ, ಎಸ್. ಸುಜಾತಾ, ಶಶಿಕಲಾ ಸುರೇಂದ್ರ, ಆರ್. ಮಂಜುನಾಥ್, ಎಲ್. ಅನಂತನಾರಾಯಣ್, ಕೆ.ಎಂ. ಸುಧಾಮಣಿ, ರವಿಕುಮಾರ್, ರತ್ನಾ ಬೇಬಿ ಜಾಧವ್, ವಿಶ್ವನಾಥ್, ಸೌಭಾಗ್ಯಾ, ಟಿ. ಕುಮಾರಸ್ವಾಮಿ, ಶೋಭಾ ಆರಾಧ್ಯ, ಸುಶೀಲಾ, ಕುಮಾರಸ್ವಾಮಿ, ದ್ವಾರಕೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-39-245992000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.