ತಿ.ನರಸೀಪುರ: ಭತ್ತದ ಖರೀದಿ ಕೇಂದ್ರಗಳನ್ನು ತುರ್ತಾಗಿ ತೆರೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ತಹಶೀಲ್ದಾರ್ ಟಿ.ಜಿ. ಸುರೇಶ್ ಆಚಾರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ಸಂಘದ ತಾಲ್ಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ‘ಭತ್ತದ ಕೊಯ್ಲು ಆರಂಭವಾಗಿ 15 ದಿನಗಳು ಕಳೆದರೂ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ಖಾಸಗಿಯವರು ಕೇಳಿದಷ್ಟು ದರಕ್ಕೆ ರೈತರು ಜಮೀನಿನಲ್ಲೇ ಭತ್ತ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಮಧ್ಯವರ್ತಿಗಳು ಹಣ ಮಾಡಿಕೊಳ್ಳುತ್ತಿದ್ದು, ರೈತರು ಮತ್ತೆ ಸಾಲ ಮಾಡಿಕೊಳ್ಳಲು ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ’ ಎಂದು ಆರೋಪಿಸಿದರು.

‘ಈ ವರ್ಷ ಉತ್ತಮ ಮಳೆಯಾದ್ದರಿಂದ ತಾಲೂಕಿನಾದ್ಯಂತ ರೈತರು ಹೆಚ್ಚು ಭತ್ತವನ್ನು ಬೆಳೆದಿದ್ದು, ಕೇಂದ್ರ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹2362 ಬೆಂಬಲ ಬೆಲೆ ಘೋಷಿಸಿದೆ. ಆದರೆ ಈ ಬೆಲೆ ರೈತ ವ್ಯವಸಾಯ ಮಾಡಿದ ಖರ್ಚು ಕೂಡ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಅಲ್ಲದೆ ಕೇರಳ, ಒಡಿಸ್ಸಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನೀಡುತ್ತಿರುವಂತೆ ಕ್ವಿಂಟಲ್ ಭತ್ತಕ್ಕೆ ₹500 ಪ್ರೋತ್ಸಾಹ ಧನವಾಗಿ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರಗಳ ಮೂಲಕ ಭತ್ತ ಖರೀದಿ ಮಾಡಿ ರಾಜ್ಯ ಸರ್ಕಾರ ಭತ್ತ ಬೆಳೆಗಾರ ರೈತರ ರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳು ಇದ್ದರೂ ಅವು ತೆರೆಯುವ ಮೊದಲೇ ರೈತರು ಸಾಲದ ಹೊರೆಗೆ ಸಿಲುಕಿ ಸ್ವಾಭಿಮಾನಕ್ಕೆ ಅಂಜಿ ಭತ್ತವನ್ನು ಕಡಿಮೆ ಬೆಲೆಗೆ ಗದ್ದೆಯಲ್ಲೆ ಮಾರಾಟ ಮಾಡಿ ಮತ್ತೆ ಸಾಲದ ಸುಳಿಗೆ ಸಿಲುಕಲು ಸರ್ಕಾರದ ವಿಳಂಬ ಧೋರಣೆಯೇ ಕಾರಣ, ಆದ್ದರಿಂದ ಭತ್ತದ ಕಟಾವು ಆರಂಭವಾಗುವ 20 ದಿನಗಳ ಮೊದಲೇ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಅನುಕೂಲ ಮಾಡಿ ಕೊಡಬೇಕು’ ಎಂದು ಆಗ್ರಹಿಸಿದರು.

‘ರೈತರು ಸರ್ಕಾರ ಘೋಷಿಸಿರುವ ಕ್ವಿಂಟಲ್ ಭತ್ತವನ್ನು ₹2369ಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡಬಾರದು ಹಾಗೂ ಬಂಡವಾಳಶಾಹಿ, ದಲ್ಲಾಳಿಗಳು ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಂದ ಭತ್ತ ಖರೀದಿಸುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಕೆಂದು ರೈತ ಮುಖಂಡರು ಒತ್ತಾಯಿಸಿದರು

ಜಿಲ್ಲಾ ಕಾರ್ಯದರ್ಶಿ ಕಿರಗಸೂರು ಶಂಕರ್, ಮಹಿಳಾ ಅಧ್ಯಕ್ಷೆ ಮುಡುಕನಪುರ ರೂಪಾ, ಪ್ರಧಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್ ನಾಯಕ್, ಕುರುಬೂರು ಪ್ರದೀಪ್, ಕರುಹಟ್ಟಿ ಉಮೇಶ್, ರಾಜೇಶ್ ಯಾಕನೂರು, ಗೌರಿಶಂಕರ್, ರಾಜೇಂದ್ರ, ಹೆಗ್ಗೂರ್ ರಂಗರಾಜ್, ಗೌರಮ್ಮ, ಮಂಟೇಸ್ವಾಮಿ, ರವಿ, ಯೋಗೇಶ್, ಕೆ.ಜಿ. ಗುರುಸ್ವಾಮಿ, ವಾಚ್ ಕುಮಾರ್, ಸೋಮಶೇಖರ್, ವೀರೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.