ಮೈಸೂರು: ‘ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೈತರ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಬೇಕು’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದು, ರೈತ ಪರ ಯೋಜನೆ ಆರಂಭಿಸುತ್ತಾರೆ ಎಂಬ ಭರವಸೆ ಇದೆ. ಮೇಕೆದಾಟು ಬೆಂಗಳೂರು ಸುತ್ತಮುತ್ತಲ ಐದು ಜಿಲ್ಲೆಗಳ ಯೋಜನೆ ಕಾರ್ಯಗತವಾಗಬೇಕು. ರೈತರಿಗೆ ನೀಡುತ್ತಿದ್ದ ಪ್ರೋತ್ಸಾಹಧನ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಬೇಕು. 40 ಲಕ್ಷ ಕೃಷಿ ಪಂಪ್ ಸೆಟ್ ರೈತರಿಗೆ ಮಾರಕ ವಾಗುವ ವಿದ್ಯುತ್ ಖಾಸಗೀಕರಣ ನಿಲ್ಲಬೇಕು’ ಎಂದು ಒತ್ತಾಯಿಸಿದರು.

‘ಚುನಾವಣೆಯಲ್ಲಿ ಭರವಸೆ ನೀಡಿದಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ಮುಂಗಾರು ಆರಂಭ ಆಗಿದ್ದು, ರೈತರಿಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ₹ 1,500 ಕೋಟಿ ಕಬ್ಬಿನ ಹಣ ಬಾಕಿ ಉಳಿದಿದೆ ಕೂಡಲೇ ಕೊಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-39-374252450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.