ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಕಾಡಾ ಕಚೇರಿ ಬಳಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತಿವೆ. ರೈತರ ಆದಾಯವನ್ನು 2026ಕ್ಕೆ ದ್ವಿಗುಣಗೊಳಿಸುತ್ತೇವೆ ಎಂದು ನರೇಂದ್ರ ಮೋದಿ ಪ್ರಚಾರ ಮಾಡಿ ಕೃಷಿಗೆ ಬಳಸುವ ರಸಗೊಬ್ಬರದ ಬೆಲೆ ಏರಿಕೆ ಮಾಡಿದ್ದಾರೆ. ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದಿಂದ ವಿದೇಶದಿಂದ ಆಮದಾಗುತ್ತಿದ್ದ ರಸ ಗೊಬ್ಬರದ ಕಚ್ಚಾವಸ್ತು ತೊಂದರೆಯಿಂದ ರಾಜ್ಯದಲ್ಲಿ ಯೂರಿಯಾ ಕೊರತೆಯಾಗಿದೆ’ ಎಂದರು.

‘ರಾಜ್ಯದಲ್ಲಿ ಶೇ 10-15ರಷ್ಟು ಪೌತಿ ಖಾತೆ ಆಗಿಲ್ಲ. ಇವರಿಗೆ ರಸಗೊಬ್ಬರ ಕೊಡುವವರು ಯಾರು? ರಾಜ್ಯ ಸರ್ಕಾರ ಪರ್ಯಾಯ ಮಾರ್ಗ ಕಂಡುಹಿಡಿದು ರೈತರಿಗೆ ರಸಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಕೃಷಿ ಯಂತ್ರೋಪಕರಣಗಳಿಗೆ ಡೀಸೆಲ್, ಪೆಟ್ರೋಲ್ ಬೇಕು. ಆದರೆ, ಬಂಕ್ಗಳಲ್ಲಿ ನೀಡುತ್ತಿಲ್ಲ. ಕೂಡಲೇ ಬಂಕ್ಗಳಲ್ಲಿ ವಿಧಿಸಿರುವ ನಿರ್ಬಂಧ ಸಡಿಲಗೊಳಿಸಿ ಯಂತ್ರೋಪಕರಣಗಳಿಗೆ ಡೀಸೆಲ್, ಪೆಟ್ರೋಲ್ ಅನ್ನು ಕ್ಯಾನ್ಗಳ ಮೂಲಕ ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಆನ್ಲೈನ್ ಗೇಮ್ಗಳ ಮೂಲಕ ರೈತರ ಮಕ್ಕಳ ಬದುಕು ಹಾಳಾಗುತ್ತಿದೆ. ತಕ್ಷಣ ಇಂತಹ ಆ್ಯಪ್ಗಳನ್ನು ಬಂದ್ ಮಾಡಬೇಕು. ತಕ್ಷಣ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ರೈತರ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ಜಿಲ್ಲಾಧ್ಯಕ್ಷ ವಳಗೆರೆ ಗಣೇಶ್, ಎಚ್. ಗುಂಡ್ಲಾ ಚಿದಂಬರ, ಮಲಿಯೂರು ಮಹೇಂದ್ರ, ಗೌಡಿಕೆ ಸೋಮಣ್ಣ, ಮುದ್ದಳ್ಳಿ ಮಧು, ಸಿದ್ದರಾಮಪ್ಪ, ದೇವಣ್ಣ, ಅಂಡುವಿನಹಳ್ಳಿ ಜಗದೀಶ್, ಮಹೇಶ್, ಗೌಡಿಕೆ ಶಿವಣ್ಣ, ದೇವಿರಮ್ಮನಹಳ್ಳಿ ಹುಂಡಿರೇವಣ್ಣ, ಸಂತು, ಮಹೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-39-1584394141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.