ಮೈಸೂರು: ‘ಮುಂಗಾರು ಆರಂಭವಾಗಿದ್ದು, ಇಂತಹ ಸಮಯದಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ, ಯೂರಿಯಾ, ಡಿಎಪಿ, ರಸಗೊಬ್ಬರ ಬೆಲೆ ಏರಿಕೆ ಸರಿಯಲ್ಲ. ರೈತರನ್ನು ನಿರ್ಲಕ್ಷ್ಯ ಮಾಡಿದರೆ ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ’ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಸಿದರು.

ಜಿಲ್ಲಾ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಇಲ್ಲಿನ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕಬ್ಬು ಬೆಳೆಯಲ್ಲಿ ಖರ್ಚು ಕಡಿಮೆ ಮಾಡಿ ಹೆಚ್ಚು ಉತ್ಪಾದನೆ ಮಾಡುವ ಸಾಮರ್ಥ್ಯವಿರುವ ಕೃತಕ ಬುದ್ಧಿಮತ್ತೆಯು ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಬೇಕು. ಈ ಬಗ್ಗೆ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಸಕ್ಕರೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ. ಪೆಟ್ರೋಲ್, ಡೀಸೆಲ್ ದರ ಪದೇ ಪದೇ ಏರಿಸುತ್ತಿರುವುದು ಸರಿಯಲ್ಲ. ಇದು ರೈತರ ಕೃಷಿ ಚಟುವಟಿಕೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ರಸಗೊಬ್ಬರ ಬೀಜ, ಡೀಸೆಲ್ ದರ ಏರಿಕೆಯಿಂದ ಕೃಷಿ ಉತ್ಪಾದನೆ ವೆಚ್ಚ ಏರಿಕೆಯಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಮೈಸೂರಿನಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣ ಬೇಡ. ಇದರಿಂದ ಪರಿಸರಕ್ಕೆ ಧಕ್ಕೆಯಾಗಿ ಉಷ್ಣಾಂಶ ಏರಿಕೆಯಾಗುತ್ತದೆ. ವ್ಯವಸ್ಥಿತ ಡಾಂಬರು ರಸ್ತೆ ನಿರ್ಮಾಣವೇ ಒಳ್ಳೆಯದು. ಸಿಮೆಂಟ್ ಉತ್ಪಾದಕ ಕಂಪನಿಗಳ ಒತ್ತಡಕ್ಕೆ ಮಣಿಯುವುದು ಬೇಡ. ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲಿಸಲು ಹುನ್ನಾರ ನಡೆಯುತ್ತಿದ್ದು, ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗಿಯವರಿಗೆ ವಹಿಸಲು ಟೆಂಡರ್ ಕರೆದಿರುವ ಪ್ರಕ್ರಿಯೆ ರೈತ ವಿರೋಧಿ ನೀತಿಯಾಗಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡರಾದ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪಿ. ಸೋಮಶೇಖರ್, ಕಿರಗಸೂರ್ ಶಂಕರ್, ವರಕೂಡ ನಾಗೇಶ್, ಪೈಲ್ವಾನ್ ವೆಂಕಟೇಶ್, ಸಿದ್ದೇಶ್, ವಿಜಯೇಂದ್ರ, ಮೂಕ್ಕಳ್ಳಿ ಮಹದೇವಸ್ವಾಮಿ, ನೀಲಕಂಠಪ್ಪ, ವರಕೋಡು ನಾಗೇಶ್, ಪಟೇಲ್ ಶಿವಮೂರ್ತಿ, ಸತೀಶ್, ಉಡಿಗಾಲ ರೇವಣ್ಣ, ಸುಂದರಪ್ಪ, ಕೆಂಡಗಣಪ್ಪ, ಪ್ರಸಾದ್ ನಾಯಕ, ಕಾಟೂರು ಮಹದೇವಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-39-1393985295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.