ಮೈಸೂರು: ರಸಗೊಬ್ಬರ ಹಾಗೂ ಇಂಧನ ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ತಾಲ್ಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟಿಸಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಆನಂದೂರು ಪ್ರಭಾಕರ್ ಮಾತನಾಡಿ, ‘ಯುದ್ಧದ ನೆಪದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಒಕ್ಕೂಟ ಮತ್ತು ರಾಜ್ಯ ಸರ್ಕಾರ ಏರಿಸಿರುವುದರಿಂದ ರೈತರೂ ಸೇರಿದಂತೆ ಎಲ್ಲಾ ಜನವರ್ಗದ ಮೇಲೆ ಪರಿಣಾಮ ಬೀರಿ ಅಗತ್ಯ ವಸ್ತುಗಳ ಬೆಲೆ, ಸಾರಿಗೆ ವೆಚ್ಚ ದುಬಾರಿಯಾಗಿದೆ’ ಎಂದರು.

‘ರಸಗೊಬ್ಬರದ ಬೆಲೆ ಹೆಚ್ಚಿಸಿರುವುದರಿಂದ ರೈತ ಸಮುದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರ ಗೊಬ್ಬರದ ಬೆಲೆ ಹೆಚ್ಚಳ ವಾಪಸ್ ಪಡೆದು ರಸಗೊಬ್ಬರ ಮೇಲಿನ ಸಬ್ಸಿಡಿ ಹೆಚ್ಚಿಸಿ ರಿಯಾಯಿತಿ ದರದಲ್ಲಿ ರೈತರಿಗೆ ಗೊಬ್ಬರ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಕಡ್ಡಾಯ ಲಿಂಕ್ ಪದ್ಧತಿ ಕೈಬಿಟ್ಟು, ರೈತರು ತಮಗೆ ಬೇಕಾದ ಗೊಬ್ಬರವನ್ನು ಕೇಳಿದಾಗ ಡೀಲರ್ಗಳು ಬೇರೆ ಗೊಬ್ಬರ ಅಥವಾ ಕೀಟ ನಾಶಕ ತೆಗೆದುಕೊಳ್ಳುಳ್ಳುವಂತೆ ಒತ್ತಾಯಿಸುವುದನ್ನು ತಡೆಗಟ್ಟಿ ರೈತರು ಕೇಳಿದ ಗೊಬ್ಬರವನ್ನೇ ಪೂರೈಸಬೇಕು. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ವಾಪಸ್ ಪಡೆಯಬೇಕು ಮತ್ತು ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡಿಸೇಲ್ ಪೂರೈಸಬೇಕು’ ಎಂದು ಆಗ್ರಹಿಸಿದರು.

‘ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ವಾಗ್ದಾನ ನೀಡಿರುವಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು, ಜಾನುವಾರು ಹತ್ಯೆ ಮತ್ತು ಸಂರಕ್ಷಣಾ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿಯನ್ನು ರೈತ ಸ್ನೇಹಿಯಾಗಿ ಬಲಪಡಿಸಬೇಕು, ಕೃಷಿ ಬೆಲೆ ಆಯೋಗವನ್ನು ಶಾಶ್ವತ ಆಯೋಗವನ್ನಾಗಿ ಘೋಷಿಸಬೇಕು’ ಎಂದರು.

ಮುಖಂಡರಾದ ಮರಂಕಯ್ಯ, ಪ್ರಧಾನ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ಉಪಾಧ್ಯಕ್ಷರಾದ ಮುದ್ದುರಾಜು, ಮಹೇಶ್, ಕಾರ್ಯಾಧ್ಯಕ್ಷ ಬಸಪ್ಪ ನಾಯಕ, ಕಾರ್ಯದರ್ಶಿ ನಾಗನಹಳ್ಳಿ ಚಂದ್ರಶೇಖರ್, ಯುವ ಘಟಕದ ಅಧ್ಯಕ್ಷ ಮಹೇಶ್, ರಾಘವೇಂದ್ರ, ಮಹಾದೇವಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-39-2114613437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.