ಮೈಸೂರು: ‘ಮನೆ ಸಾಲಕ್ಕೆ ಜನಸ್ಮಾಲ್ ಫೈನಾನ್ಸ್ ಶೇ 21ರಷ್ಟು ಬಡ್ಡಿ ವಿಧಿಸಿದೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಕೆಡಿ ರಸ್ತೆಯ ಸಿಗ್ನಲ್ ಜಂಕ್ಷನ್ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘಟನೆ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ‘ತಾಲ್ಲೂಕಿನ ಹಳೇ ರಾಮನಹಳ್ಳಿಯ ರೈತ ಸಿದ್ದರಾಜು ಅವರು 5 ವರ್ಷದ ಹಿಂದೆ ಜನಸ್ಮಾಲ್ ಫೈನಾನ್ಸ್ನ ಸೇಲ್ಸ್ ವಿಭಾಗದವರ ಮಾತಿಗೆ ಮರುಳಾಗಿ ಮನೆ ಕಟ್ಟಲು ₹ 10.5 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದು 4 ವರ್ಷಗಳಾಗಿವೆ. ಈಗಾಗಲೇ ಸಿದ್ದರಾಜು ₹ 10.5 ಲಕ್ಷ ಫೈನಾನ್ಸ್ಗೆ ಪಾವತಿ ಮಾಡಿದ್ದಾರೆ. ಇನ್ನೂ ₹ 14.5 ಲಕ್ಷ ಕಟ್ಟಿ ಇಲ್ಲವಾದರೆ ಮನೆ ಖಾಲಿ ಮಾಡಿ ಎಂದು ಬ್ಯಾಂಕಿನ ಸಿಬ್ಬಂದಿ ಸಿದ್ದರಾಜು ಅವರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸಿದ್ದರಾಜುವಿನಿಂದ ಈಗಾಗಲೇ ಅಸಲು ಹಣ ಕಟ್ಟಿಸಿಕೊಂಡಿದ್ದಾರೆ. ಬಡ್ಡಿಯನ್ನು ಫೈನಾನ್ಸ್ನವರು ಮನ್ನಾ ಮಾಡಿ ಮನೆಯ ದಾಖಲೆ ನೀಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡರಾದ ಮಂಡಕಳ್ಳಿ ಮಹೇಶ, ಚಂದ್ರಶೇಖರ, ರಾಘವೇಂದ್ರ, ಉಮೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-39-969742920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.