ಮೈಸೂರು: ತಾಲ್ಲೂಕಿನ ಹುಣಗನಹಳ್ಳಿ ಗ್ರಾಮದ ಫಾರಂ ಹೌಸೊಂದಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬನ್ನೂರು ರಸ್ತೆಯ ಸುತ್ತಮುತ್ತಲ ಗ್ರಾಮಗಳಲ್ಲಿ ಭ್ರೂಣಲಿಂಗ ಪತ್ತೆ ಕಾರ್ಯ ನಡೆಯುತ್ತಿರುವ ಮಾಹಿತಿಯ ಮೇರೆಗೆ ಎರಡು ತಿಂಗಳಿಂದ ಕಣ್ಗಾವಲು ಇಟ್ಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ, ಜಾಲವನ್ನು ಪತ್ತೆ ಹಚ್ಚಿದ್ದಾರೆ.

'ಬೆಳಿಗ್ಗೆ 6.30ರ ವೇಳೆ ಗರ್ಭಿಣಿ ಮಹಿಳೆಯೊಂದಿಗೆ ತೆರಳಿದ್ದಾಗ ಭ್ರೂಣ ಲಿಂಗ ಪತ್ತೆ ಮಾಡುತ್ತಿರುವುದು ಕಂಡುಬಂದಿತು. ಆಗ ತಪಾಸಣೆಗೆ ಬಂದಿದ್ದ ನಾಲ್ವರು ಗರ್ಭಿಣಿಯರೂ ಇದ್ದರು. ಸ್ಕ್ಯಾನಿಂಗ್ ಉಪಕರಣವೂ ಸಿಕ್ಕಿದೆ' ಎಂದು ಡಿಎಚ್ಒ ಡಾ. ಪಿ.ಸಿ.ಕುಮಾರಸ್ವಾಮಿ 'ಪ್ರಜಾವಾಣಿ'ಗೆ ತಿಳಿಸಿದರು.

'ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ (ಪಿ.ಸಿ.ಪಿ.ಎನ್.ಡಿ.ಟಿ) ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.