ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಬಹುನಿರೀಕ್ಷಿತ ‘ಫಿಲಂ ಸಿಟಿ’ (ಚಿತ್ರ ನಗರಿ) ನಿರ್ಮಾಣಕ್ಕೆ ಸಂಬಂಧಿಸಿದ ಚಟುವಟಿಕೆಗಳು ಚುರುಕುಗೊಂಡಿವೆ.

ಉದ್ದೇಶಿತ ಸ್ಥಳದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೇ 80ರಷ್ಟು ಪೂರ್ಣಗೊಂಡಿದೆ. 10 ಅಡಿ ಎತ್ತರದ ಕಾಂಪೌಂಡ್ ನಿರ್ಮಾಣವನ್ನು ಬರೋಬ್ಬರಿ ₹ 7 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗಿದೆ.

ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲಿನ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಬಜೆಟ್ನಲ್ಲಿ ಘೋಷಿಸಲಾಗಿತ್ತು. ‘ಚಿತ್ರನಗರಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ’ ಎಂದು ಮುಖ್ಯಮಂತ್ರಿ ಹೇಳುತ್ತಲೇ ಬಂದಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಕಾಂಪೌಂಡ್ ನಿರ್ಮಾಣ ಕಾರ್ಯವು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿರೀಕ್ಷೆಗಳು ಗರಿಗೆದರುವಂತೆ ಮಾಡಿದೆ. ಜಾಗವನ್ನು ‘ಭದ್ರಪಡಿಸಿಕೊಳ್ಳುವ’ ನಿಟ್ಟಿನಲ್ಲಿ ಕಾಂಪೌಂಡ್ ನಿರ್ಮಿಸಲಾಗುತ್ತಿದ್ದು, ಅದರ ಮೇಲೆ ಫೆನ್ಸಿಂಗ್ (ಬೇಲಿ) ಹಾಕುವುದಕ್ಕೆ ಯೋಜನೆ ರೂಪಿಸಲಾಗಿದೆ.

ಜಾಗ ಹಸ್ತಾಂತರ: ಚಿತ್ರ ನಗರಿ ನಿರ್ಮಾಣಕ್ಕಾಗಿ ವಾರ್ತಾ ಇಲಾಖೆಗೆ ಕರ್ನಾಟಕ ಕೈಗಾರಿಕಾ ಪ್ರವೇಶಾಭಿವೃದ್ಧಿ ಮಂಡಳಿಯು 160 ಎಕರೆ ಜಮೀನು ಹಸ್ತಾಂತರಿಸಿದೆ. ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕೈಗಾರಿಕಾ ಪ್ರವೇಶಾಭಿವೃದ್ಧಿ ಮಂಡಳಿ ಮುಂತಾದ ಇಲಾಖೆಯೊಂದಿಗೆ ಸದಾ ಸಂಪರ್ಕದಲ್ಲಿದ್ದು, ಸಮನ್ವಯ ಸಾಧಿಸಿ ಯೋಜನೆ ಅನುಷ್ಠಾನಕ್ಕೆ ದಾಖಲೆ ಒದಗಿಸಲು ‘ನೋಡಲ್ ಅಧಿಕಾರಿ’ಯನ್ನಾಗಿ ಹಾಲಿ ಮಂಡ್ಯ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಅವರನ್ನು ನೇಮಿಸಲಾಗಿದೆ. ಅವರು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

‘ಚಿತ್ರ ನಗರಿಗೆ ನೀಡಲಾದ ಜಮೀನಿನ ಕಾಂಪೌಂಡ್ ಕೆಲಸ ಪ್ರಗತಿಯಲ್ಲಿದ್ದು, ಶೇ 80ರಷ್ಟು ಪೂರ್ಣಗೊಂಡಿದೆ. ಪ್ಲಾಸ್ಟರಿಂಗ್ ಕೆಲಸ ಬಾಕಿ ಇದೆ. ಪ್ರವೇಶ ದ್ವಾರದಲ್ಲಿ ದೊಡ್ಡ ಗೇಟ್ ಅಳವಡಿಸುವ ಕಾರ್ಯ ನಡೆಯಬೇಕಿದೆ. ಕಾಂಪೌಂಡ್ ಮೇಲೆ ತಂತಿ ಬೇಲಿ ಅಳವಡಿಸಲಾಗುವುದು. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ್ದೇನೆ’ ಎಂದು ನೋಡಲ್ ಅಧಿಕಾರಿ ಹರೀಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಟೆಂಡರ್ಗೆ ಕ್ರಮ: ಕಾಮಗಾರಿಯ ಟೆಂಡರ್ ಆಹ್ವಾನಿಸುವ ಪ್ರಕ್ರಿಯೆ ನಡೆಯುತ್ತಿದೆ. ವ್ಯವಹಾರ ವಹಿವಾಟುದಾರ ಸಂಸ್ಥೆಯು ಸಿದ್ಧಪಡಿಸಿರುವ ಕರಡು ಟೆಂಡರ್ ಪ್ರಸ್ತಾವವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ನೇತೃತ್ವದ ಆಂತರಿಕ ಪಿಪಿಪಿ ಕೋಶವು ಪರಿಶೀಲಿಸಿ, ಕೆಲವು ಮಾರ್ಪಾಡುಗಳಿಗೆ ಸೂಚಿಸಿದೆ. ಪರಿಷ್ಕರಣೆಯ ನಂತರ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಕೋಶಕ್ಕೆ ಕರಡು ಟೆಂಡರ್ ಅನುಮೋದನೆಗೆ ಕಳುಹಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಯೋಜನೆಗೆಂದು ಮೊದಲಿಗೆ 110 ಎಕರೆ ಭೂಮಿ ಮೀಸಲಿಡಲಾಗಿತ್ತು. ನಂತರ, ಹೆಚ್ಚುವರಿಯಾಗಿ 2ನೇ ಹಂತದ ವಿಸ್ತರಣೆಗೆಂದು 50 ಎಕರೆ ಜಮೀನು ಗುರುತಿಸಿ ನೀಡಲಾಗಿದೆ. ಶಂಕುಸ್ಥಾಪನೆಗೆ ಇನ್ನೂ ಮುಹೂರ್ತ ನಿಗದಿಯಾಗಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-51721539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.