ಮೈಸೂರು: ನಗರದ ಹೊರವಲಯದಲ್ಲಿರುವ ಹಳೇ ಕೆಸರೆ ಸಮೀಪ ಸೋಮವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ಗೋದಾಮುಗಳು ಬೆಂಕಿಗೆ ಆಹುತಿಯಾಗಿವೆ.

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಳಿ ವರುಣ ಕಾಲುವೆಗೆ ಹೊಂದಿಕೊಂಡಂತಿರುವ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಮುಂಜಾನೆ ಮೂರು ಗಂಟೆ ವೇಳೆಗೆ ತಾಮ್ರದ ತಂತಿಗಳನ್ನು ಸಂಗ್ರಹಿಸಿದ್ದ ಗೋದಾಮು ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಸುತ್ತಮುತ್ತಲಿನ ಇತರ ಮಳಿಗೆಗಳಿಗೂ ವ್ಯಾಪಿಸಿದೆ. ಬೆಂಕಿ ಧಗಧಗನೆ ಉರಿಯತೊಡಗಿದ್ದು, ಆಳೆತ್ತರದ ಜ್ವಾಲೆಗಳೆದ್ದು ಸುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು.

ಸುದ್ದಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ದಳದ ಸಿಬ್ಬಂದಿ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು. ಮೂರ್ನಾಲ್ಕು ಗಂಟೆಗಳ ಪ್ರಯತ್ನದ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.

ಈ ಗೋದಾಮುಗಳಲ್ಲಿ ಹಳೆಯ ಹಾಗೂ ತ್ಯಾಜ್ಯ ವಸ್ತುಗಳು, ಪೀಠೋಪಕರಣಗಳು, ನಿರುಪಯುಕ್ತ ಎಲೆಕ್ಟ್ರಾನಿಕ್ ಸಾಮಗ್ರಿಗಳು, ಪ್ಲೈವುಡ್, ಸೋಫಾ ಮೊದಲಾದವುಗಳನ್ನು ಇಡಲಾಗಿತ್ತು. ಪೀಠೋಪಕರಣ ತಯಾರಿಕಾ ಘಟಕವೂ ಇತ್ತು. ಒಟ್ಟಾರೆ ನಷ್ಟದ ಕುರಿತು ಇನ್ನಷ್ಟೇ ಅಂದಾಜು ಸಿಗಬೇಕಿದೆ.

ನರಸಿಂಹರಾಜ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು.

‘ಎರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಇಂಥದ್ದೇ ಅಗ್ನಿ ಅವಘಡ ಸಂಭವಿಸಿತ್ತು. ಅಂದು ಇವುಗಳ ಮಾಲೀಕರು ಹಾಗೂ ಬಾಡಿಗೆದಾರರಿಗೆ ದಹನಕಾರಿ ವಸ್ತುಗಳ ಸಂಗ್ರಹ ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡಲಾಗುವುದು’ ಎಂದು ಪೊಲೀಸರು ಮಾಹಿತಿ ನೀಡಿದರು.

ವೈರ್ ಸುಟ್ಟಿದ್ದೇ ಕಾರಣ?

‘ಅಗ್ನಿ ಅವಘಡ ಸಂಬಂಧಿಸಿದ ಪ್ರದೇಶದಲ್ಲಿ ಕೆಲವರು ರಾತ್ರಿ ಹೊತ್ತು ಎಲೆಕ್ಟ್ರಿಕ್ ವೈರ್ಗಳನ್ನು ಸುಟ್ಟು ಅವುಗಳಿಂದ ತಾಮ್ರದ ತಂತಿಗಳನ್ನು ಬೇರ್ಪಡಿಸುವ ಕೆಲಸ ಮಾಡುತ್ತಿರುತ್ತಾರೆ. ಕೆಲವೊಮ್ಮೆ ರಾತ್ರಿ ಹೊತ್ತು ಸುತ್ತಮುತ್ತ ದಟ್ಟ ಹೊಗೆ ಆವರಿಸಿರುತ್ತದೆ. ಭಾನುವಾರ ರಾತ್ರಿಯೂ ಹೀಗೆ ಬೆಂಕಿ ಹಾಕಿದ್ದು ಅದರಿಂದ ಈ ಅವಘಡ ಸಂಭವಿಸಿರಬಹುದು’ ಎಂದು ಸ್ಥಳೀಯ ನಿವಾಸಿಗಳು ಶಂಕೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.