ಮೈಸೂರು: ‘ಜಾನಪದಕ್ಕೆ ಪ್ರಾಮುಖ್ಯತೆ ಕಡಿಮೆಯಾಗಿ, ಅವು ಮರೆಯಾಗುತ್ತಿವೆ. ಹೀಗಾಗಿ ಸರ್ಕಾರ ಮತ್ತು ಸಂಘ– ಸಂಸ್ಥೆಗಳು ಜಾನಪದ ವನ್ನು ಜೀವಂತವಾಗಿಡುವ ಪ್ರಯತ್ನ ಮಾಡಬೇಕು’ ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಹೇಳಿದರು.

ಜಿಲ್ಲಾ ಕನ್ನಡ ಜಾನಪದ ಪರಿಷತ್, ಕಾಗಿನೆಲೆ ಶಿಕ್ಷಣ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಜಾನಪದದ ಪ್ರತಿ ಹಾಡು, ಪ್ರತಿ ಶಬ್ದಕ್ಕೂ ಅರ್ಥವಿದೆ. ಸೂಕ್ಷ್ಮ ವಿಚಾರಗಳನ್ನು ಸರಳವಾಗಿ ತಿಳಿಸಲು ಅವು ಸಹಾಯಕ’ ಎಂದರು.

ವಿವಿಧ ವಿವಿಗಳಿಂದ ಪಿಎಚ್.ಡಿ ಹಾಗೂ ಗೌರವ ಡಾಕ್ಟರೇಟ್ಗೆ ಭಾಜನರಾಗಿರುವ ಎಂ. ರಾಮಪ್ಪ, ಜಯಲಕ್ಷ್ಮೀಪುರಂ ಸಂತ ಜೋಸೆಫರ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ಚಂದ್ರಶೇಖರ, ಜಾನಪದ ಗಾಯಕ ಅಮ್ಮ ರಾಮಚಂದ್ರ, ಪೂಜಾ ಕುಣಿತ ಕಲಾವಿದ ಸಿ. ಸುಂದರೇಶ್, ಸಮಾಜ ಕೊಂಗಳ್ಳಿಯ ಬಿ. ಶಂಕರ್, ತಿಮ್ಮಶೆಟ್ಟಿ, ಮುಖಂಡ ಬೈಪಾಸ್ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಗೌರವ ಕಾರ್ಯದರ್ಶಿ ಎಂ. ಪುಟ್ಟಬಸವೇಗೌಡ, ಕಾಗಿನೆಲೆ ಬಿ.ಇಡಿ. ಕಾಲೇಜಿನ ಪ್ರಾಂಶುಪಾಲೆ ಕೆ.ಕೆ. ವಿಶಾಲಾಕ್ಷಿ, ಜಾನಪದ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ವಿಭಾಗೀಯ ಸಂಚಾಲಕಿ ಕಾವೇರಿ ಪ್ರಕಾಶ್, ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಬೇಸೂರು ಮೋಹನ್ ಪಾಳೇಗಾರ್, ಎ.ಎಲ್. ಸುರೇಶ್ಚಂದ್ರ, ದೊರೆಸ್ವಾಮಿ, ಶಿವಕುಮಾರ್ ಪಾಲ್ಗೊಂಡಿದ್ದರು.

ಸ್ವಾತಿ ಮತ್ತು ಪನ್ನಗವಿಜಯ್ಕುಮಾರ್ ಪ್ರಾರ್ಥಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-228114452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.