ಮೈಸೂರು: ‘ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸಿಲಿಂಡರ್ಗಳ ದರ ಹೆಚ್ಚಳದಿಂದ ಜನರ ಜೀವನವನ್ನೇ ಘಾಸಿಗೊಳಿಸಿದ್ದು, ಬಡ, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಹಾಗೂ ಶ್ರಮಿಕರು ಬದುಕುವುದೇ ಕಷ್ಟವಾಗಿದೆ’ ಎಂದು ಕೆಪಿಸಿಸಿ ಸದಸ್ಯ ಅಶೋಕಪುರಂನ ಪಿ.ರಾಜು ತಿಳಿಸಿದ್ದಾರೆ.

‘ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಚಿನ್ನದ ಬೆಲೆ ಎಷ್ಟಿತ್ತು, ಈಗ ಏಕೆ ಇಷ್ದು ದುಬಾರಿಯಾಗಿದೆ ಎಂಬುದರ ಬಗ್ಗೆ ಚರ್ಚೆಯಾಗಬೇಕು, ಮನಮೋಹನ್ ಸಿಂಗ್ ಅವರ ಆಡಳಿತದ ಅವಧಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹60ರಿಂದ ₹65 ಇತ್ತು. ಗೃಹಬಳಕೆ ಸಿಲಿಂಡರ್ ₹340–₹400 ಹಾಗೂ ವಾಣಿಜ್ಮ ಸಿಲಿಂಡರ್ ದರ ₹450ರಿಂದ ₹500 ಇತ್ತು. ಪ್ರಸ್ತುತ ನರೇಂದ್ರ ಮೋದಿ ಅವರ ಆಡಳಿತದ ಅವಧಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹106, ಡೀಸೆಲ್ ದರ ₹96, 10 ಗ್ರಾಂ ಚಿನ್ನದ ಬೆಲೆ ₹1.60 ಲಕ್ಷವಾಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದರ ₹960 ಹಾಗೂ ವಾಣಿಜ್ಯ ಸಿಲಿಂಡರ್ ದರ ₹3000ವಾಗಿದ್ದು, ಇದರಿಂದ ಬಡ ಮಧ್ಯಮ ಶ್ರಮಿಕ ವರ್ಗಕ್ಕೆ ತುಂಬಾ ತೊಂದರೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-39-1299747658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.