ಮೈಸೂರು: ರಾರಾಜಿಸುವ ನೀಲಿ ಬಾವುಟ, ಅಂಬೇಡ್ಕರ್ಗೆ ಗಟ್ಟಿ ಧ್ವನಿಯ ಜೈಕಾರ, ಅಸ್ತಿತ್ವದ ಹಾದಿ ತೋರಿದ ನೆಚ್ಚಿನ ನಾಯಕನ ಜಯಂತಿಗೆ ಗಾಂಧಿ ನಗರದ ಬೀದಿಗಳು ಮೈಕೊಡವಿ ನಿಂತು ಸಂಭ್ರಮಿಸಿದವು.

ಡಾ.ಬಿ.ಆರ್.ಅಂಬೇಡ್ಕರ್ ಗಾಂಧಿನಗರ ನಾಗರಿಕರ ಹಿತರಕ್ಷಣಾ ಸಮಿತಿಯು ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಮಂಗಳವಾರ ರಾತ್ರಿ ಆಯೋಜಿಸಿದ್ದ ‘ಭೀಮೋತ್ಸವ’ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ವಿಧಾನಪರಿಷತ್ ಸದಸ್ಯ ಶಿವಕುಮಾರ್, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವ ಎನ್.ಮಹೇಶ್, ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ, ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಪರಮಾನಂದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಮೆರವಣಿಗೆಯುದ್ದಕ್ಕೂ ಕೈಯಲ್ಲಿ ಮೊಂಬತ್ತಿ ಹಿಡಿದು ಸಾರ್ವಜನಿಕರು ಸಾಗಿದರು. ಕತ್ತಲೆಯಲ್ಲಿದ್ದ ಸಮಾಜಕ್ಕೆ ಬೆಳಕಿನ ಆಸರೆ ನೀಡಿದ ಮಹಾತ್ಮನಿಗೆ ಜಯಘೋಷಗಳು ನಿರಂತರವಾಗಿ ಕೇಳಿಬಂದವು. ತೆರೆದ ವಾಹನದಲ್ಲಿ ಅಂಬೇಡ್ಕರ್ ಪ್ರತಿಮೆ ಸಾಗಿತು. ಗಾಂಧಿ ನಗರದ ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಡೊಳ್ಳು, ಕಂಸಾಳೆ, ನಗಾರಿ, ಚೆಂಡೆ ಸೇರಿದಂತೆ ಹಲವಾರು ಕಲಾ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.

ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯು ಗಾಂಧಿ ನಗರದ ಮಾರುತಿ ವೃತ್ತ, ರಬ್ಬಾನಿ ಮಸೀದಿ ವೃತ್ತದ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿ ಗಾಂಧಿ ನಗರದ ಮೈದಾನದಲ್ಲಿ ಮುಕ್ತಾಯಗೊಂಡಿತು.

ಮೆರವಣಿಗೆ ಆರಂಭಕ್ಕೂ ಮುನ್ನ ಮನೆ ಮಂಚಮ್ಮ ದೇವಸ್ಥಾನದ ಎದುರು ರಕ್ತದಾನ ಶಿಬಿರ ನಡೆಯಿತು. ಸಂಜೆ ಪುರಭವನದಿಂದ ಗಾಂಧಿನಗರ ಅಂಬೇಡ್ಕರ್ ಪುತ್ಥಳಿತವರೆಗೆ ಬೈಕ್ ಜಾಥಾ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-39-176489476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.