ಮೈಸೂರು: ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರಿಗೆ ಮೈಸೂರಿನ ಏಳನೇ ಅಧಿಕ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದು, ₹ 40 ಸಾವಿರ ದಂಡ ವಿಧಿಸಿದೆ.

ಮೈಸೂರಿನ ಭರತ್ ನಗರದ ನಿವಾಸಿ ಸದ್ದಾಂ (33) ಶಿಕ್ಷೆಗೆ ಗುರಿ ಯಾದ ವ್ಯಕ್ತಿ. ಈತ ಮೈಸೂರು-ಬೆಂಗಳೂರು ರಸ್ತೆಯ ರಾಯಲ್ ಜಂಕ್ಷನ್ ಹಾಲ್ ಬಳಿ 2023ರ ಸೆ. 25ರಂದು ಗಾಂಜಾ ಮಾರಾಟ ಮಾಡುತ್ತಿದ್ದಾಗ ಎನ್.ಆರ್.ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆತನಿಂದ 2 ಕೆಜಿ 568 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಜಯ ನಗರ ಠಾಣೆ: ಹಾಸನದ ಶಬ್ಬೀರ್ (35), ಲಿಖಾಯತ್ ಖಾನ್ (40) ಮತ್ತು ಅಜಯ್ ಕುಮಾರ್ (32) ಶಿಕ್ಷೆಗೆ ಗುರಿಯಾದವರು. ಈ ಮೂವರು ಆಟೋ ರಿಕ್ಷಾದಲ್ಲಿ 5.918 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದಾಗ ವಿಜಯ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಇವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಎಂ.ರಮೇಶ್ ಎರಡೂ ಪ್ರಕರಣಗಳ ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದಾರೆ. ಎನ್.ಬಿ.ವಿಜಯಲಕ್ಷ್ಮೀ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-670483077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.