ಮೈಸೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಕೆ.ಎಂ.ರವಿ ವಿರುದ್ಧ 7ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ರವಿ ಅವರು ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಸರ್ಕಲ್ನಲ್ಲಿ 2024ರ ಜುಲೈ 17ರಂದು ಕಟ್ಟೆ ಮಳಲವಾಡಿ ಕಡೆಯಿಂದ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಆಗ ಸೆನ್ ವಿಭಾಗದ ಎಸ್ಐ ರಘು ಅವರನ್ನು ವಿಚಾರಣೆ ನಡೆಸಿ, ಚೀಲದಲ್ಲಿದ್ದ ಗಾಂಜಾ ಸೊಪ್ಪು ವಶಕ್ಕೆ ಪಡೆದಿದ್ದರು.

ಲಮಣಿ ಸುಷ್ಮಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ರಮೇಶ್ ಎನ್ಡಿಪಿಎಸ್ ಕಾಯ್ದೆ ಅಡಿ ಗಾಂಜಾ ಸಾಗಣೆ ಅಪರಾಧಕ್ಕೆ 2 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರ ಎನ್. ಬಿ. ವಿಜಯಲಕ್ಷ್ಮಿ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-38-209689313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.