ಮೈಸೂರು: ‘ಸೌಂದರ್ ರಾಜ್ ಅಲಿಯಾಸ್ ಚಿನ್ನ ತಂಬಿ ಬಳಿ ಚಿನ್ನಾಭರಣ ಅಡವಿಟ್ಟು ಮೋಸ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು’ ಎಂದು ಜನತಾದಳ (ಸಂಯುಕ್ತ)– ಕರ್ನಾಟಕ ರಾಜ್ಯ ಉಪಾಧ್ಯಕ್ಷ ಕೆ.ವಿ.ಶಿವರಾಮ್ ಆಗ್ರಹಿಸಿದರು.

ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮಾರುಕಟ್ಟೆ ಮೌಲ್ಯಕ್ಕಿಂತ ಕಡಿಮೆಬಡ್ಡಿ ಹಾಗೂ ಗರಿಷ್ಠ ಬೆಲೆಗೆ ಖರೀದಿಸುವುದಾಗಿ ಗ್ರಾಹಕರನ್ನು ಆಕರ್ಷಿಸಿ ಅವರಿಂದ ಚಿನ್ನಾಭರಣಗಳ ಖರೀದಿ ಮತ್ತು ಗಿರವಿ ಇಟ್ಟುಕೊಂಡು ವಂಚಿಸಲಾಗಿದೆ. ಅಲ್ಲದೆ ಗ್ರಾಹಕರ ಚಿನ್ನಾಭರಣಗಳನ್ನು ಕರಗಿಸಿ ದುರುಪಯೋಗ ಪಡಿಸಿಕೊಂಡು ಮೋಸ ಮಾಡಲಾಗಿದೆ. ಹೀಗಾಗಿ ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಈತನ ಮೇಲೆ ದೂರು ನೀಡಿ 2 ವರ್ಷಗಳಾದರೂ ಕ್ರಮ ವಹಿಸದ ಆದಾಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಮೌನವಹಿಸಿದರೆ ತೀವ್ರ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಎಸ್.ಎಸ್.ಮೂರ್ತಿ, ಕೂಡ್ಲೂರು ಶ್ರೀಧರಮೂರ್ತಿ, ರಂಗನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-1613628944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.