ಮೈಸೂರು: ಅಕ್ರಮವಾಗಿ ಗೌಜಲ ಹಕ್ಕಿ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೈಸೂರು ತಾಲ್ಲೂಕು ರಮ್ಮನಹಳ್ಳಿ ನಿವಾಸಿ ಶಿವಣ್ಣ (50) ಬಂಧಿತ ವ್ಯಕ್ತಿ. ಮಹದೇವಪುರ ರಸ್ತೆಯ ರಮ್ಮನಹಳ್ಳಿಗೆ ಸೇರಿದ ಮೈದಾನದ ಬಳಿ 2 ಗೌಜಲ ಹಕ್ಕಿಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ದೊರೆತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ಬಳಿ ಇದ್ದ ಎರಡು ಗೌಜಲ ಹಕ್ಕಿ ಹಾಗೂ 11 ಪಂಜರ ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರು ಮಾರ್ಗದರ್ಶನದಲ್ಲಿ ಮೈಸೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಎಸ್ಐ ಪಿ. ಕಿರಣ್ ಕುಮಾರ್, ಸಿಬ್ಬಂದಿ ವೆಂಕಟೇಶ್, ರಾಮಕೃಷ್ಣ, ಯತೀಶ್ ಕುಮಾರ್, ಶಶಿಧರ್ ಮತ್ತು ಅರುಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

₹7.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಮೈಸೂರು: ವಿಜಯ ನಗರದ ನಾಲ್ಕನೇ ಹಂತದ ವಿಶ್ವನಾಥ್ ರವೀಂದ್ರನ್ ಅವರ ಮನೆಯ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು, ₹ 7.5 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ವಿಶ್ವನಾಥ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ಮೇ 25ರಂದು ಮನೆಗೆ ವಾಪಸ್ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ಹೋಗಿ ಪರಿಶೀಲನೆ ನಡೆಸಿದಾಗ ಕಳ್ಳರು ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-171067818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.