ಮೈಸೂರು: ಭೂಮಾಫಿಯಾ ಜೊತೆ ಶಾಮೀಲಾಗಿ ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಆರೋಪದ ಮೇಲೆ ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಎನ್. ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪೌರಾಡಳಿತ ನಿರ್ದೇಶನಾಲಯ ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದು, ಅವರನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಎಫ್ಡಿಎ ಹುದ್ದೆಗೆ ವರ್ಗಾಯಿಸಲಾಗಿದೆ.

ಮತ್ತೊಬ್ಬ ಆರೋಪಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಎಸ್.ಮಹೇಶ್, ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1 ಹುದ್ದೆಯಲ್ಲಿದ್ದು, ಅವರ ಮೇಲೆ ಕ್ರಮಕ್ಕಾಗಿ ನಗರಾಭಿವೃದ್ಧಿ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಸರ್ಕಾರಿ ಆಸ್ತಿಯಾದ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ. 259/5ರ ಮೂಲ ದಾಖಲೆಗಳನ್ನು ಪರಿಶೀಲಿಸದೆ, ಖಾಸಗಿಯವರಿಗೆ ಇ-ಆಸ್ತಿ ಸೃಜಿಸಲಾಗಿತ್ತು. ನಂತರ ಅಧಿಕಾರ ವ್ಯಾಪ್ತಿ ಮೀರಿ, ಏಕಾಏಕಿ ಆ ಖಾತೆಗಳನ್ನು ರದ್ದುಪಡಿಸಿ ತಹಶೀಲ್ದಾರರಿಗೆ ವರದಿ ನೀಡಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ.

ಸಾರ್ವಜನಿಕರ ದೂರುಗಳ ಕಾರಣಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಹಾನಗರಪಾಲಿಕೆಯ ಉಪ ಆಯುಕ್ತರ (ಕಂದಾಯ) ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ತನಿಖಾಧಿಕಾರಿ ಸೋಮಶೇಖರ್ ನೀಡಿದ ಪ್ರಾಥಮಿಕ ವರದಿಯಲ್ಲಿ ಭ್ರಷ್ಟಾಚಾರ ಮೇಲ್ನೋಟಕ್ಕೆ ದೃಢಪಟ್ಟಿತ್ತು. ವರದಿ ಆಧರಿಸಿ ಜಿಲ್ಲಾಧಿಕಾರಿಯು ಮೇ 21ರಂದು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-1343963159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.