ಮೈಸೂರು: ಕೆಲಸದ ಒತ್ತಡದಲ್ಲೇ ಕಾಲ ಕಳೆಯುತ್ತಿದ್ದ ಸರ್ಕಾರದ ವಿವಿಧ ಇಲಾಖೆಗಳ ನೌಕರರು ಗುರುವಾರ, ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆರಂಭವಾದ ಕ್ರೀಡಾಕೂಟದಲ್ಲಿ ಪ್ರತಿಭೆ ತೋರಿ ನಿರಾಳರಾದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಹಾಕಿ, ಕುಸ್ತಿ, ಕಬಡ್ಡಿ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

ಬಿಸಿಲಿನಲ್ಲೇ ಆಟ:

ಚಳಿ ಗಾಳಿಯ ಜೊತೆಗೆ ಬಿಸಿಲಿನಲ್ಲೇ ಆಟೋಟದಲ್ಲಿ ತೊಡಗಿಸಿಕೊಂಡ ನೌಕರರು 100 ಮೀ., 800 ಮೀ., 1,500 ಮೀ. ಓಟದ ಸ್ಪರ್ಧೆ, ಉದ್ದಜಿಗಿತ, ಹೈಜಂಪ್ ಸೇರಿದಂತೆ ಅಥ್ಲೆಟಿಕ್ಸ್ನಲ್ಲಿ ಬೆವರು ಹರಿಸಿದರು.

ಕ್ರೀಡೆಯಲ್ಲಿ ಪಾಲ್ಗೊಳ್ಳಿ:

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ‘ನೌಕರರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಅದರಿಂದ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ’ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ‘ನೌಕರರು ಮಾನಸಿಕ ಒತ್ತಡಗಳಿಂದ ಹೊರ ಬರಲು ಕ್ರೀಡಾ ಮಾರ್ಗ ಅನುಸರಿಸಬೇಕು. ಯಾವುದಾದರೊಂದು ಆಟದಲ್ಲಿ ತೊಡಗಿಸಿಕೊಳ್ಳಬೇಕು. ನಿತ್ಯ ಆಡಬೇಕು’ ಎಂದು ಸಲಹೆ ನೀಡಿದರು.

ಶಾಸಕ ಟಿ.ಎಸ್.ಶ್ರೀವತ್ಸ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜೆ.ಗೋವಿಂದರಾಜು, ಕಾರ್ಯದರ್ಶಿಗಳಾದ ಎಂ.ಕೆ.ಗಣೇಶ್, ಜಯಪ್ಪ, ಸಂಘಟನಾ ಕಾರ್ಯದರ್ಶಿ ಮಹದೇವ, ಜಂಟಿ ಕಾರ್ಯದರ್ಶಿ ಮಾಲೇಗೌಡ, ವಿಭಾಗೀಯ ಉಪಾಧ್ಯಕ್ಷ ಮಾಲಂಗಿ ಸುರೇಶ್, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ.ಅರುಣಕುಮಾರ, ಎಸ್.ರೇವಣ್ಣ, ರಘು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.