ಮೈಸೂರು: ಇಲ್ಲಿನ ಯಾದವಗಿರಿಯ ಮೈಸೂರು ನಗರಪಾಲಿಕೆ ವಲಯ ಕಚೇರಿ- 4ರಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಚಾಮರಾಜ ವಿಧಾನಸಭಾ ಕ್ಷೇತ್ರದ ಕಚೇರಿಯನ್ನು ಶಾಸಕ ಕೆ. ಹರೀಶ್ ಗೌಡ ಈಚೆಗೆ ಉದ್ಘಾಟಿಸಿದರು.

‘ಸರ್ಕಾರದ ಪ್ರಮುಖ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಸಮಿತಿಯ ಪದಾಧಿಕಾರಿಗಳಿಗೆ ದೊರಕಿದೆ. ಗ್ಯಾರಂಟಿ ಯೋಜನೆಯು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸುವ ಕೆಲಸವಾಗಬೇಕು’ ಎಂದರು.

‘ಗ್ಯಾರಂಟಿ ಯೋಜನೆಯು ಬಡವರ್ಗದ ಕುಟುಂಬಗಳಿಗೆ ನೆರವಾಗಿದೆ. ಯೋಜನೆಗಳಿಂದ ವಂಚಿತರಾಗಿದ್ದರೆ ಅವರಿಗೆ ಮಾಹಿತಿ ನೀಡಿ ಯೋಜನೆ ತಲುಪಿಸಿ. ಜಿಲ್ಲಾ ಪದಾಧಿಕಾರಿಗಳೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ’ ಎಂದು ತಿಳಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಸುಶೀಲಾ ಮರಿಗೌಡ ಅವರಿಗೆ ಗಣ್ಯರು ಹೂಗುಚ್ಛ ನೀಡಿ ಅಭಿನಂದಿಸಿದರು.

ಪಾಲಿಕೆ ವಲಯ ಕಚೇರಿ- 4ರ ಮಹೇಶ್ ಕುಮಾರ್ ಎಸ್. ಜಿಗಣಿ, ಕಾಂಗ್ರೆಸ್ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್. ಮೂರ್ತಿ, ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು, ಸಮಿತಿಯ ಸದಸ್ಯರಾದ ಬಿ.ಕೆ. ಸುರೇಶ್, ರಾಜು, ವೆಂಕಟೇಶ್, ಚಂದ್ರಕಲಾ, ಸಮಿನಾ, ಆನಂದ್, ರಾಮಕೃಷ್ಣ ಹಾಗೂ ವಿಕಾಸ್ ಸಿಂಹ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-39-185127299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.