ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಿರುವ ಫಲವತ್ತಾದ ಭೂಮಿ ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಹೋರಾಟವು 100ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಹೋರಾಟಗಾರರು ಸಭೆ ನಡೆಸಿದರು.

ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು ಮಾತನಾಡಿ, ‘ಹೋರಾಟವನ್ನು ಬೆಂಬಲಿಸುವ ಸಂಘಟನೆಗಳ ಮುಖಂಡರು ಇಲ್ಲಿನ ವಸ್ತು ಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಗಳ ಮೂಲಕ ಜನರಿಗೆ ಮಾಹಿತಿ ನೀಡಬೇಕು. ತಜ್ಞರ ಸಮಿತಿ ಮೂಲಕ ಮಣ್ಣಿನ ಫಲವತ್ತತೆ ಪರಿಶೀಲನೆ ಮಾಡಿಸಿ, ಇಲ್ಲಿ ಆಸ್ಪತ್ರೆ ನಿರ್ಮಾಣ ಅಗತ್ಯವೇ ಎಂಬುದನ್ನು ತಿಳಿಯಬೇಕು’ ಎಂದರು.

ಮುಂದಿನ ವಾರ ಗುಡುಮಾದನಹಳ್ಳಿಯಿಂದ ಆರ್ಸಿ ಕಚೇರಿಗೆ ಜಾಥಾ ನಡೆಸೋಣ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಮಾಡಬೇಕು ಎಂದು ನಿರ್ಣಯ ಕೈಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-1070465891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.