ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಹಜ್ ಸಮಿತಿಯ ಸಹಯೋಗದಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ 2026ನೇ ಸಾಲಿನಲ್ಲಿ ಹಜ್ಗೆ ತೆರಳುವ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.

ಈ ಯಾತ್ರೆಗೆ ಸರ್ಕಾರಿ ಸಹಭಾಗಿತ್ವದಲ್ಲಿ 620 ಹಾಗೂ ಖಾಸಗಿಯಾಗಿ 64 ಜನ ಸೇರಿ ಒಟ್ಟು 684 ಮಂದಿ ನೋಂದಾಯಿಸಿದ್ದಾರೆ. ಈ ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಲಸಿಕೆ ನೀಡಲಾಯಿತು.

ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಫಲಾನುಭವಿಗೆ ಲಸಿಕೆ ನೀಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮದ್, ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ಹಜ್ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-39-517769696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.