ಮೈಸೂರು: ‘ಆರೋಗ್ಯಕರ ಜೀವನ ಹಾಗೂ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಬೇಕಿದೆ’ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು.

ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಹಾಗೂ ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘ಸ್ವಸ್ಥ ಮೈಸೂರು’ ಆರೋಗ್ಯ ಜಾಗೃತಿ ಮತ್ತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸ್ವಸ್ಥ ಮೈಸೂರು ಎಂಬ ಹೆಸರಿನ ಅರ್ಥವೇ ಮೈಸೂರು ನಗರವನ್ನು ಸಂಪೂರ್ಣವಾಗಿ ಆರೋಗ್ಯಕರ ಮತ್ತು ರೋಗ ಮುಕ್ತವಾಗಿಸುವುದಾಗಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಅಭಿಯಾನ. ವಿದ್ಯಾರ್ಥಿಗಳು ಹಾಗೂ ಯುವಜನರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು’ ಎಂದರು.

‘ಸ್ವಚ್ಛತೆ, ಉತ್ತಮ ಆಹಾರ ಪದ್ಧತಿ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬಹುದು’ ಎಂದರು.

ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಬಿ.ಎಂ.ಸುಬ್ರಾಯ, ಸ್ವಸ್ಥ ಮೈಸೂರು ರಾಯಭಾರಿ ಡಾ.ಭರತ್ ಶೆಟ್ಟಿ , ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ವೃದ್ಧಾರೋಗ್ಯ ವಿಭಾಗದ ಮುಖ್ಯಸ್ಥೆ ಡಾ.ಪ್ರತಿಭಾ ಪೆರೇರಾ, ಕಾಲೇಜಿನ ಪ್ರಾಂಶುಪಾಲ ಹನುಮಂತಾಚಾರ್ ಜೋಶಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-39-102489023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.