ಮೈಸೂರು: ‘ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಎನ್ನುವುದು ಕೇವಲ ತಾಂತ್ರಿಕ ಅವಶ್ಯಕತೆಯಲ್ಲ. ಅದೊಂದು ನೈತಿಕ ಹೊಣೆಗಾರಿಕೆ’ ಎಂದು ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಜೆಎಸ್ಎಸ್ಎಎಚ್ಇಆರ್) ಸಹ ಕುಲಾಧಿಪತಿ ಡಾ. ಬಿ. ಸುರೇಶ್ ಪ್ರತಿಪಾದಿಸಿದರು.

ಇಲ್ಲಿನ ಜೆಎಸ್ಎಸ್ ಫಾರ್ಮಸಿ ಕಾಲೇಜಿನ ರಾಜೇಂದ್ರ ಸಭಾಂಗಣದಲ್ಲಿ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಗುಣಮಟ್ಟ ವಿಭಾಗದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಕ್ವಾಲಿಟಿ ಕಾನ್ಕ್ಲೇವ್–2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಂಸ್ಥೆಯ ಶ್ರೇಷ್ಠತೆಯನ್ನು ಕಾಯ್ದುಕೊಳ್ಳುವಲ್ಲಿ ಪರಸ್ಪರ ವಿಶ್ವಾಸ, ಜವಾಬ್ದಾರಿತನ ಹಾಗೂ ನಿರಂತರ ಸುಧಾರಣೆ ಅತ್ಯಗತ್ಯ’ ಎಂದರು.

ಕುಲಪತಿ ಡಾ. ಎಚ್. ಬಸವನಗೌಡಪ್ಪ ‘ಶಿಕ್ಷಣ, ಸಂಶೋಧನೆ, ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಒಂದು ನಿರಂತರ ಪಯಣ. ಇದು ಸಂಸ್ಥೆಯ ಕಾರ್ಯಸಂಸ್ಕೃತಿಯ ಅವಿಭಾಜ್ಯ ಅಂಗವಾಗಬೇಕು’ ಎಂದರು.

ಸಂಶೋಧನಾ ವಿಭಾಗದ ಡೀನ್ ಡಾ. ಪ್ರಶಾಂತ್ ವಿಶ್ವನಾಥ್, ‘ಕೆರಿಯರ್ಸ್ 360’ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಮಹೇಶ್ವರ್ ಪೆರಿ, ಕೆಪಿಎಂಜಿ ಇಂಡಿಯಾದ ಸಹ ನಿರ್ದೇಶಕ ಎಸ್. ರಾಘವನ್, ಎನ್. ಹರಪ್ರಸಾದ್ ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-39-2031362875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.