ಮೈಸೂರು: ‘ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶು ಮರಣಕ್ಕೆ ಕಾರಣವಾಗಿರುವ ವೈದ್ಯಕೀಯ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ಸಂಚಾಲಕ ಎಂ.ಬಿ.ನಾಗಣ್ಣಗೌಡ ಒತ್ತಾಯಿಸಿದ್ದಾರೆ.

‘8 ವರ್ಷದಲ್ಲಿ 4,566 ಶಿಶು ಸಾವು’ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯ ಮೈಸೂರು ಆವೃತ್ತಿಯಲ್ಲಿ ಮಂಗಳವಾರ ಪ್ರಕಟವಾಗಿದ್ದ ವರದಿ ಉಲ್ಲೇಖಿಸಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದಿರುವ ಅವರು, ‘ಮೈಸೂರಿನ ಚಲುವಾಂಬ ಆಸ್ಪತ್ರೆಯೊಂದರಲ್ಲೇ ಈ ಪ್ರಮಾಣದ ಶಿಶು ಮರಣ ಸಂಭವಿಸಿರುವುದು ದಿಗ್ಭ್ರಮೆ ಹುಟ್ಟಿಸುವ ಸಂಗತಿ’ ಎಂದಿದ್ದಾರೆ.

‘ಹಳೆ ಮೈಸೂರು ಭಾಗದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರ ಕೊರತೆಯಿದೆ. 6 ಮಂಜೂರಾದ ಶಿಶು ವೈದ್ಯರ ಹುದ್ದೆಗಳಲ್ಲಿ ಕೇವಲ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದಲ್ಲದೆ ಸರ್ಕಾರಿ ಆಸ್ಪತ್ರೆಯ ಬಹುತೇಕ ಸಿಬ್ಬಂದಿ ನಿರ್ಲಕ್ಷ್ಯ ಹಾಗೂ ಸೇವಾಪರತೆಯಿಲ್ಲದೆ ಕರ್ತವ್ಯ ನಿರ್ವಹಿಸುವುದು ಕಂಡು ಬಂದಿದೆ. ಬಡವರು, ಶ್ರಮಿಕರು ಈ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದು, ದನಿ ಎತ್ತುವ ಶಕ್ತಿ ಇಲ್ಲದ್ದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಇಲ್ಲಿನ ವೈದ್ಯರು ಖಾಸಗಿಯಾಗಿ ಕ್ಲಿನಿಕ್ ಕೂಡ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಶಿಶು ಮರಣ ಪ್ರಮಾಣ ತಡೆಗಟ್ಟುವಿಕೆ ಸಮಿತಿ ಸಭೆ ಪ್ರತಿ ತಿಂಗಳು ನಡೆದರೂ ಯಾವುದೇ ಪ್ರಯೋಜನವಿಲ್ಲ. ವೈದ್ಯಕೀಯ ನಿರ್ಲಕ್ಷ್ಯ ಹಾಗೂ ಖಾಸಗಿ ನರ್ಸಿಂಗ್ ಹೋಂಗಳ ಲಾಬಿ ಪ್ರಮುಖ ಕಾರಣವಾಗಿದೆ. ಶಿಶು ಮರಣ ಪ್ರಮಾಣ ತಡೆಗಟ್ಟಲು ಜಿಲ್ಲಾಧಿಕಾರಿ ಹಾಗು ಜಿ.ಪಂ. ಸಿಇಒ ತ್ರೈಮಾಸಿಕ ಸಭೆ ಕಡ್ಡಾಯವಾಗಿ ನಡೆಸಬೇಕು. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯ ವಹಿಸಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮವಾಗಬೇಕು. ಖಾಲಿ ಹುದ್ದೆಗಳ ಭರ್ತಿ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-40-1832188895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.