ಮೈಸೂರು: ನಗರದ ಸಾತಗಳ್ಳಿ ಬಡಾವಣೆಯಲ್ಲಿ ಚರ್ಮ ಕುಶಲ ಕರ್ಮಿಗಳಿಗೆ 396 ಜಿ+2 ಮನೆಗಳನ್ನು ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ಮುಂದುವರಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಸದಸ್ಯರು ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಗುರುವಾರ ಮನವಿ ಸಲ್ಲಿಸಿದರು.

‘ಪರಿಶಿಷ್ಟ ಜಾತಿ ಜನಾಂಗಕ್ಕೆ ಸೇರಿದ ಚರ್ಮ ಕುಶಲಕರ್ಮಿಗಳು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಆರ್ಥಿಕವಾಗಿ ಕಡುಬಡವರಾಗಿದ್ದು, ವಸತಿ ಹೀನರಾಗಿದ್ದಾರೆ. ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಮನೆಯನ್ನು ನಿರ್ಮಿಸಿಕೊಡಲು ಚರ್ಮ ಕುಶಲಕರ್ಮಿಗಳು ಫಲಾನುಭವಿಗಳ ಆಯ್ಕೆ ಪಟ್ಟಿ, 376 ಜಿ+2 ಮನೆಗಳು ಆಯ್ಕೆಯಾಗಿದೆ’ ಎಂದು ತಿಳಿಸಿದರು.

‘ಸಾತಗಳ್ಳಿ ಲಿಡ್ಕರ್ ಜಮೀನಿನಲ್ಲಿ ಮನೆಗಳ ನಿರ್ಮಾಣ ಕಾಮಗಾರಿ 4 ವರ್ಷಗಳಿಂದ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಬೇಕು’ ಎಂದು ಮನವಿ ಮಾಡಿದರು.

ವೇದಿಕೆಯ ಅಧ್ಯಕ್ಷ ವಿ. ನಾರಾಯಣ ಹಾಗೂ ಮಹಾನಾಯಕ ಡಾ. ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಕುಮಾರ್, ಚಂದ್ರಶೇಖರ್, ಸಿ. ಮಂಜುನಾಥ್, ಕಿಶೋರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-39-960474256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.