ಮೈಸೂರು: ಹುಣಸೂರು ತಾಲ್ಲೂಕಿನಲ್ಲಿ ಪತ್ತೆಯಾಗಿರುವ ಡ್ರಗ್ಸ್ ದಾಸ್ತಾನು ಕೊಠಡಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದ ಅಗ್ರಹಾರ ವೃತ್ತದಲ್ಲಿ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು.

ಸಂಘಟನೆ ರಾಜ್ಯ ಕಾರ್ಯಕಾರಣಿ ಸದಸ್ಯೆ ಮೇಘನಾ ಕೋಡಬಾಳ ಮಾತನಾಡಿ, ‘ಹುಣಸೂರು ತಾಲ್ಲೂಕಿನ ದಾಸನಹಳ್ಳಿಯಲ್ಲಿ ಈಚೆಗೆ ಪತ್ತೆಯಾದ ಡ್ರಗ್ಸ್ ಸಂಗ್ರಹ ದಾಸ್ತಾನು ಸಮಸ್ಯೆಯ ಗಂಭೀರತೆ ತೆರೆದಿಟ್ಟಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ಅದರ ಜಾಲ ಪತ್ತೆಹಚ್ಚಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.

‘ಗ್ರಾಮೀಣ ಪ್ರದೇಶದಲ್ಲಿ ಮಾದಕ ವಸ್ತುಗಳ ಜಾಲ ವ್ಯಾಪಕವಾಗುತ್ತಿರುವುದು ಆಘಾತಕಾರಿ ಬೆಳವಣಿಗೆ. ಯುವಕರನ್ನು ಗುರಿಯಾಗಿಸಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸಮಾಜದ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರಿಗೂ ವಾಗ್ವಾದ ನಡೆಯಿತು. ಬಳಿಕ ಪ್ರತಿಭಟಕಾರರನ್ನು ಪೊಲೀಸರು ಮನವೊಲಿಸಿದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-38-317428615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.