ಮೈಸೂರು: ‘ಹುಣಸೂರು ತಾಲ್ಲೂಕಿನ ಬಿಳಿಕೆರೆಯಲ್ಲಿನ ನಾಡಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. 40 ವರ್ಷದ ಹಳೆಯ ಕಟ್ಟಡವಾಗಿದ್ದು, ಕುಸಿಯುವ ಆತಂಕ ಎದುರಾಗಿದೆ. ಆದರೂ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸದೆ ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಇಲವಾಲ ಹೋಬಳಿ ಯಾಚೇನಹಳ್ಳಿಯ ಸಾಮಾಜಿಕ ಹೋರಾಟಗಾರ ರವಿಕುಮಾರ್ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಟ್ಟಡದ ಚಾವಣಿ ಶಿಥಿಲಗೊಂಡಿದ್ದು, ಕುಸಿಯುವ ಭೀತಿ ಎದುರಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಸರ್ವೆ ನಂ–188ರಲ್ಲಿ 20 ಗುಂಟೆ ಜಮೀನು ಮಂಜೂರಾಗಿದೆ. ಹೀಗಿದ್ದರೂ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು. ಹೋರಾಟಗಾರರಾದ ಮಹೇಶ್, ಕಾಂತರಾಜು, ನಾಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-1534620795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.