ಮೈಸೂರು: ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಶಿಶು ಮರಣ ಘಟನೆಯ ಕುರಿತು ಶೀಘ್ರಗತಿಯ ತನಿಖೆ ನಡೆಸಿ, ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂ ಎಸ್ಎಸ್) ಸದಸ್ಯೆಯರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿಗೆ ಮನವಿ ಸಲ್ಲಿಸಿದರು.

‘ಚಲುವಾಂಬ ಆಸ್ಪತ್ರೆಯಲ್ಲಿ ಶಿಶು ಮರಣ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಮಕ್ಕಳ ಮನೆಯವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಕ್ರಮವಹಿಸಬೇಕು. ಗುರುವಾರ ಸಾವನ್ನಪ್ಪಿದ ಶಿಶುವಿನ ತಂದೆ ದಿನಗೂಲಿ ಕೆಲಸ ಮಾಡುತ್ತಿದ್ದು. 8 ದಿನಗಳಿಂದ ಕೆಲಸಕ್ಕೂ ಹೋಗದೆ, ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗಾಗಿ ಇರಬೇಕಾದ ಅನಿವಾರ್ಯ ಇತ್ತು. ಈಗ ಮಗುವನ್ನೂ ಕಳೆದುಕೊಂಡಿರುವ ನೋವು ಜೊತೆಗೆ ಸಾಲದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷೆ ನಳಿನ, ಉಪಾಧ್ಯಕ್ಷರಾದ ಸೀಮಾ ಜಿ.ಎಸ್, ಆಸಿಯಾ ಬೇಗಂ, ಪುಷ್ಪಾ ಮತ್ತು ಪದ್ಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-705336839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.